May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಾವಳಿಯಲ್ಲಿ ಅಗ್ನಿಶಾಮಕ ದಳ ಬಲವರ್ಧನೆ ಅಗತ್ಯ – MLC ಕಿಶೋರ್ ಕುಮಾರ್ ಪುತ್ತೂರು

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ 2025 ಕುರಿತು ಇಂದು ಆಗಸ್ಟ್ 21ರಂದು ಗುರುವಾರ ನಡೆದ ಚರ್ಚೆಯಲ್ಲಿ MLC ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಅವರು, “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ಮಳೆಯ ಸಮಯದಲ್ಲಿ ಭಾರೀ ಹಾನಿ ಸಂಭವಿಸುತ್ತಿದೆ. ಆದರೆ ಅಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ದಳವು ಫಸ್ಟ್ ರೆಸ್ಪಾಂಡರ್ ಆಗಿ ಸೂಕ್ತವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಈ ವೇಳೆ ಮೊದಲು ಮಾತನಾಡಿದ MLC ಐವನ್ ಡಿಸೋಜರವರು “ಅಗ್ನಿಶಾಮಕ ದಳದ ಬಳಿ ಸೂಕ್ತ ವಾಹನಗಳಿಲ್ಲ, ತುಕ್ಕು ಹಿಡಿದು ಹೋಗಿದೆ” ಎಂದು ಹೇಳಿದಾಗ ಗೃಹಸಚಿವರು ಅವರ ಮಾತನ್ನು ನಿರ್ಲಕ್ಷಿಸಿ “ಐವನ್ ಟ್ರ್ಯಾಕ್ ತಪ್ಪಿದ್ದಾರೆ” ಎಂದು ಪ್ರತಿಕ್ರಿಯಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರುರವರು, “ಐವನ್ ಡಿಸೋಜರವರು ಟ್ರ್ಯಾಕ್ ತಪ್ಪಿಲ್ಲ. ನಮ್ಮ ಕರಾವಳಿಯಲ್ಲಿ ವರುಣನ ಆರ್ಭಟಕ್ಕೆ ಜನತೆ ತತ್ತರಿಸಿದ್ದಾರೆ. ಉಳ್ಳಾಲದಲ್ಲಿ ಸಂಭವಿಸಿದ ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಮನೆ ಕುಸಿತದಲ್ಲಿ ಸಾವನ್ನಪ್ಪಿದರು; ಅವರ ತಾಯಿ ತನ್ನೆರಡು ಕಾಲುಗಳನ್ನು ಕಳೆದುಕೊಂಡರು. ಇಂತಹ ದುಃಖಕರ ಘಟನೆಗಳನ್ನು ತಡೆಯಲು ಜಿಲ್ಲೆಯಲ್ಲಿ ಅಗ್ನಿಶಾಮಕ ದಳದಲ್ಲಿ ಹೆಚ್ಚಿನ ಯುವಕರನ್ನು ಸೇರಿಸಿ, ವಿಶೇಷ ಟಾಸ್ಕ್ ಫೋರ್ಸ್ ರಚನೆ ಅಗತ್ಯವಾಗಿದೆ” ಎಂದು ಒತ್ತಾಯಿಸಿದರು.

ಅವರು ಗೃಹಸಚಿವರಲ್ಲಿ, “ಮುಂದೆ ಇಂತಹ ಪ್ರಕೃತಿ ಆಪತ್ತುಗಳು ಸಂಭವಿಸಿದರೆ ತಕ್ಷಣ ಸ್ಪಂದಿಸಲು ಮತ್ತು ಪ್ರಾಣ ಹಾನಿಯನ್ನು ಕಡಿಮೆ ಮಾಡಲು ಕರಾವಳಿ ಜಿಲ್ಲೆಗಳಲ್ಲಿ ಅಗ್ನಿಶಾಮಕ ದಳವನ್ನು ಬಲವರ್ಧಿಸಬೇಕು” ಎಂದು ಮನವಿ ಮಾಡಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page