July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಂಗ ತರಬೇತಿ ಕೇಂದ್ರ ಆರಂಭಿಸಲು ಚಿಂತನೆ – ನಟ, ನಿರ್ದೇಶಕ ಡಾ. ದೇವದಾಸ್ ಕಾಪಿಕಾಡ್

ರಂಗಭೂಮಿಯ ಬಗ್ಗೆ ಈಗ ಸಮಾಜದಲ್ಲಿ ಗೌರವದ ಭಾವನೆ ಇದೆ. ಮಕ್ಕಳು ಸೇರಿದಂತೆ ಯುವ ಜನಾಂಗ ನಾಟಕದಲ್ಲಿ ಅಭಿನಯಿಸಲು ಆಸಕ್ತಿ ವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ರಂಗಾಸಕ್ತರನ್ನು ಕಲಾವಿದರಾಗಿ ಬೆಳೆಸುವ ನಿಟ್ಟಿನಲ್ಲಿ ರಂಗ ತರಬೇತಿ ಕೇಂದ್ರವೊಂದನ್ನು ತೆರೆಯಲು ಸಿದ್ಧತೆ ನಡೆಸಲಾಗಿದೆ ಎಂದು ನಟ, ನಿರ್ದೇಶಕ ಡಾ. ದೇವದಾಸ್ ಕಾಪಿಕಾಡ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಮುಂದಿನ ವರ್ಷ ರಂಗ ತರಬೇತಿ ಕೇಂದ್ರ ಕಾರ್ಯಾರಂಭಿಸಲಿದೆ’ ಎಂದರು.

ಬಾಲ್ಯದಲ್ಲಿ ಬಡತನವಿತ್ತು. ಶಾಲಾ ದಿನಗಳಲ್ಲೇ ನಾಟಕ ಮತ್ತು ಹಾಡುಗಾರಿಕೆಯಲ್ಲಿ ಆಸಕ್ತಿ ವಹಿಸಿಸಿದೆ. ಜತೆಗೆ ಹಾಸ್ಯ ಪ್ರವೃತ್ತಿ ಇತ್ತು. ಶಾಲಾ ಗುರುಗಳು ಪ್ರೋತ್ಸಾಹ ನೀಡಿದರು. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ ಶಿಕ್ಷಣಕ್ಕೆ ಸೇರ್ಪಡೆಯಾದದ್ದು ಬದುಕಿಗೆ ಹೊಸ ತಿರುವು ನೀಡಿತು. ನನ್ನೊಳಗಿನ ಕಲಾವಿದ ಬೆಳಕಿಗೆ ಬರಲು ಅವಕಾಶ ದೊರೆಯಿತು. ವಿದ್ಯಾರ್ಥಿಗಳು ಕಲಿಕೆಯ ಜತೆಗೆ ತಮಗೆ ಅಭಿರುಚಿ ಇರುವ ಕಲೆಯಲ್ಲಿ ಪರಿಣತಿ ಪಡೆಯಬೇಕು ಎಂದು ಅವರು ಹೇಳಿದರು. ಬಿ.ವಿ. ಕಿರೋಡಿಯನ್ ಅವರು ನನ್ನ ರಂಗಭೂಮಿಯ ಗುರುಗಳು. ಅವರಿಂದ ಅಭಿನಯದ ತರಬೇತಿ ಪಡೆದೆ. ಬದುಕಿನಲ್ಲಿ ಸಾಕಷ್ಟು ನೋವು ಕಂಡಿದ್ದೇನೆ. ಹಾಗಾಗಿ ಛಲ ಮೂಡಿತು. ನನ್ನದೇ ಆದ ಚಾ ಪರ್ಕ ತಂಡದ ಮೂಲಕ ಶುದ್ಧ ಹಾಸ್ಯದ ನಾಟಕಗಳನ್ನು ಪ್ರದರ್ಶಿಸಿ ಯಶಸ್ಸು ಕಂಡೆ. ತುಳುನಾಡಿನ ಜನರ ಅಭಿಮಾನ ಹಾಗೂ ಆಶೀರ್ವಾದದಿಂದ ಬೆಳೆದೆ. ಈಗ ಪ್ರದರ್ಶನವಾಗುತ್ತಿರುವ ‘ಎನ್ನನೇ ಕಥೆ ’60ನೇ ನಾಟಕ ಎಂದು ಅವರು ಹೇಳಿದರು.

ಶ್ರೀನಿವಾಸ ವಿ.ವಿ. ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಶ್ಮಿತಾ ಎಸ್. ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್  ಕ್ಲಬ್  ಅಧ್ಯಕ್ಷ ಪಿ.ಬಿ. ಹರೀಶ್ ರೈ  ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ  ಅನ್ನು ಮಂಗಳೂರು, ಪ್ರೆಸ್‌ ಕ್ಲಬ್‌ನ ಸ್ಥಾಪಕ  ಅಧ್ಯಕ್ಷ ಆನಂದ ಶೆಟ್ಟಿ, ಮಹಾರಾಷ್ಟ್ರ – ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತ ಸಂತೋಷ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page