April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮದ ಹೆಸರಿನಲ್ಲಿ ವೈಮನಸ್ಸು ಹುಟ್ಟಿಸಲು ಯತ್ನ – ಪುತ್ತೂರಿನಲ್ಲಿ ಪ್ರಕರಣ ದಾಖಲು

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಜೋನ್ಸನ್ ಡೇವಿಡ್ ಸೀಕ್ವೆರಾರವರಿಂದ ದೂರು ದಾಖಲು

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ 35 ವರ್ಷ ಪ್ರಾಯದ ಜೋನ್ಸನ್ ಡೇವಿಡ್ ಸೀಕ್ವೆರಾರವರು ನೀಡಿದ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:77/2025 ರಂತೆ ಪ್ರಕರಣ ದಾಖಲಾಗಿದೆ.

ಪಿರ್ಯಾದಿನ ಪ್ರಕಾರ ಆಗಸ್ಟ್ 19ರಂದು ಮಂಗಳವಾರ ನಡೆದ ನೃತ್ಯ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಸಮುದಾಯದ ವಿಧ್ಯಾರ್ಥಿನಿಯರು ಭಾಗವಹಿಸಿದ್ದನ್ನು ಆಕ್ಷೇಪಿಸುತ್ತಾ, @tm_bad_karma_990 ಎಂಬ ಇನ್ಸ್ಟಾಗ್ರಾಂ ಖಾತೆಯ ಬಳಕೆದಾರರು ಧರ್ಮದ ಆಧಾರದಲ್ಲಿ ವೈಮನಸ್ಸು ಹುಟ್ಟಿಸುವಂತ ಸುಳ್ಳು ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿದ್ದಲ್ಲದೇ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 196(1)(a)(b), 351(2), 352 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.

ಧರ್ಮ ಸಮುದಾಯಗಳ ನಡುವೆ ಬಾಂಧವ್ಯವು ಇರಲೇಬೇಕು ಅದು ಸಮಾಜದ ಶಾಂತಿ ಮತ್ತು ಸೌಹಾರ್ದತೆಯ ಆಧಾರ. ವೈಮನಸ್ಸನ್ನು ಬಿತ್ತುವ ಪ್ರಯತ್ನಗಳನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ.

You may also like

News

Saint Theresa’s School Mangaluru Records 22nd Consecutive Year of 100% Success in ICSE Class X Exams 2025–26

Principal Sr Lourdes  and faculty congratulate students on their success MANGALURU: In a resounding celebration of intellectual brilliance and disciplined
News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ

You cannot copy content of this page