May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಮೂಡುಬಿದ್ರೆಯ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಮಂಗಳೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪದವಿ ಪೂರ್ವ ಕಾಲೇಜಿನ ಶ್ರೀನಿವಾಸ ಮಧ್ಯಸ್ಥ, ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅಂಬರೀಷ ಚಿಪ್ಲೂಣಕರ್, ಸುರತ್ಕಲ್ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಪೈಕ ವೆಂಕಟರಮಣ ಭಟ್ ಇವರು ಆಯ್ಕೆಯಾಗಿದ್ದಾರೆ.  ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಡಾ. ಸುರೇಖಾ ತಂತ್ರಿ, ಜೊತೆ ಕಾರ್ಯದರ್ಶಿಗಳಾಗಿ ಮಂಗಳೂರು ಮ್ಯಾಪ್ಸ್ ಪದವಿ ಪೂರ್ವ ಕಾಲೇಜಿನ ಶೈಲಜಾ ಹೆಚ್. ಎಸ್., ಮೂಡುಬಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಅನಂತ ಭಟ್, ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಮಹೇಂದ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ಮೂಡುಬಿದ್ರೆಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ತೇಜಸ್ವಿ ಭಟ್ ರವರು ಆಯ್ಕೆಯಾಗಿದ್ದಾರೆ.

ಖಜಾಂಚಿಯಾಗಿ ಮಂಗಳೂರಿನ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ರವಿಶಂಕರ ಹೆಗಡೆ, ರಾಜ್ಯಮಟ್ಟದ ಸಂಘಕ್ಕೆ ಜಿಲ್ಲಾ ಸಂವಹನ ಪ್ರತಿನಿಧಿಯಾಗಿ ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಕಾಶ್ ವಿ.ಕೆ. ಆಯ್ಕೆಯಾಗಿದ್ದಾರೆ. ಸಲಹಾ ಸಮಿತಿಯ ಸದಸ್ಯರಾಗಿ ಮಂಗಳೂರು ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಅಜಿತಾ, ಮಂಗಳೂರು ಕೆನರಾ ಪದವಿ ಪೂರ್ವ ಕಾಲೇಜಿನ ಡಾ. ಮಧುಕೇಶ್ವರ ಶಾಸ್ತ್ರಿ, ಮೂಡಬಿದ್ರೆ ಜೈನ್ ಪದವಿ ಪೂರ್ವ ಕಾಲೇಜಿನ ರಾಮಚಂದ್ರ ಭಟ್, ಅಳಿಕೆ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ವೆಂಕಟಕೃಷ್ಣ ಶರ್ಮಾ ರವರು ಆಯ್ಕೆಯಾಗಿದ್ದಾರೆ.

You may also like

News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a
News

ಸೂರಿಕುಮೇರು – ಮಾಣಿಯಲ್ಲಿ ಅದ್ದೂರಿ ‘ಅನ್ಫಾಲ್ ರೆಸ್ಟೋರೆಂಟ್’ ಮೇ 3ರಂದು ಉದ್ಘಾಟನೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಭಾಗಿ ಉದ್ಘಾಟನಾ ಭವ್ಯ ಸಮಾರಂಭದಲ್ಲಿ ಮೂವರು ಸಾಧಕರಾದ ಚೇತನ್ ರೈ, ನಾಗರಾಜ್ ಶೆಟ್ಟಿ ಹಾಗೂ ಯಾಸೀರ್ ಕಲ್ಲಡ್ಕ

You cannot copy content of this page