April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ರವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎ.ಜೆ. ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ. ಕುಮಾರ್ ರವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ.) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಕರೀಷ್ಮಾ ಎಸ್. ರವರು ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಚೈಲ್ಡ್ ವೆಲ್ಫೇರ್ ಬ್ಯುರೋದ ಸಹ ಸಂಸ್ಥಾಪಕಿಯಾಗಿದ್ದು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page