September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸ್ಸಾ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ಕಾರ್ಯಾಚರಣೆ ಯಶಸ್ವಿ

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ನೀಡಿರುವ ಮಾಹಿತಿಯ ಪ್ರಕಾರ, ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸ್ಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ವಿರುದ್ಧ ಲಂಚ ಸ್ವೀಕರಿಸಿದ ಪ್ರಕರಣ ದಾಖಲಾಗಿದೆ.

ಪಿರ್ಯಾದಿದಾರರ ಮಾವನವರು 1 ಎಕರೆ ಕೃಷಿ ಜಮೀನಿಗೆ ನೀರಿನ ಸೌಲಭ್ಯಕ್ಕಾಗಿ 2024ರಲ್ಲಿ ಮತ್ತು ನಂತರ 2025ರಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಮಂಜೂರಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪಂಚಾಯತ್ ಕಚೇರಿಯಲ್ಲಿ ಸರಿಯಾದ ಪ್ರತಿಕ್ರಿಯೆ ದೊರಕದೆ, ಅಧ್ಯಕ್ಷೆ ನಫಿಸ್ಸಾ 10 ಸಾವಿರ ರೂಪಾಯಿ ಲಂಚ ನೀಡಿದಲ್ಲಿ ಮಾತ್ರ ಬೋರ್‌ವೆಲ್ ಮಂಜೂರು ಮಾಡಿಕೊಡುತ್ತೇನೆ ಎಂದು ಸ್ಪಷ್ಟವಾಗಿ ಬೇಡಿಕೆ ಇಟ್ಟಿದ್ದರು.

ಸೆಪ್ಟೆಂಬರ್ 06ರಂದು ಬಿಲ್ ಕಲೆಕ್ಟರ್ ವಿಲಿಯಂ ಪಿರ್ಯಾದುದಾರರಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಅಧ್ಯಕ್ಷೆ ನಫಿಸ್ಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಇವರೀರ್ವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ. ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್., ರವಿ ಪವಾರ್ ಮತ್ತು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಯಶಸ್ವಿಯಾಗಿ ಕೈಗೊಂಡಿದ್ದಾರೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page