September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರವನ್ನೇ ಬುಡಮೇಲು ಮಾಡುವ ಶಕ್ತಿ ಇದೆ – ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾಣಿ

ಮಾಹಿತಿ ನೀಡದಿದ್ದಲ್ಲಿ 25 ಸಾವಿರ ರೂಪಾಯಿ ದಂಡ ವಿಧಿಸಲು ಶಿಫಾರಸು

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 274, ಕಂದಾಯ ಇಲಾಖೆಯ 194, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 64, ಪೋಲಿಸ್ ಇಲಾಖೆಗೆ ಸಂಬಂಧಿಸಿದ 40 ಅರ್ಜಿಗಳು ಸೇರಿ ಒಟ್ಟಾರೆಯಾಗಿ ಜಿಲ್ಲೆಯಲ್ಲಿ 707 ಅರ್ಜಿಗಳು ದ್ವಿತೀಯ ಮೇಲ್ಮನವಿ ಪ್ರಾಧಿಕಾರವಾದ ಮಾಹಿತಿ ಆಯೋಗದಲ್ಲಿ ಬಾಕಿ ಉಳಿದಿವೆ. ಮೇಲ್ಮನವಿ ವಿಚಾರಣೆಗೆ ಸ್ವೀಕೃತವಾಗುವ ಕ್ರಮಾಂಕದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ 21ನೇ ಸ್ಥಾನದಲ್ಲಿದ್ದು ಶೇಕಡಾ 67ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಬೇಕಿದೆ. ಅವುಗಳನ್ನು ಶೂನ್ಯ ಸ್ಥಾನಕ್ಕೆ ತರಲು ಜಿಲ್ಲೆಯ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ನಾವು ಆಯುಕ್ತರಾಗಿ ಅಧಿಕಾರ ಸ್ವೀಕರಿಸುವ ಅವಧಿಯಲ್ಲಿ ಮಾಹಿತಿ ಹಕ್ಕು ಆಯೋಗದಲ್ಲಿ 52 ಸಾವಿರ ಪ್ರಕರಣಗಳು ವಿಲೇವಾರಿಗೆ ಬಾಕಿ ಉಳಿದಿದ್ದವು, ಕಳೆದ ಏಳು ತಿಂಗಳಲ್ಲಿ ವಿಚಾರಣೆ ನಡೆಸಿದ ಪರಿಣಾಮ ನಿನ್ನೆಯವರೆಗೆ 42,327 ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಕೆಲವೊಂದು ಅರ್ಜಿಗಳು 2015ರಿಂದಲೂ ಇತ್ಯರ್ಥಕ್ಕೆ ಬಾಕಿ ಉಳಿದಿದ್ದು, ಅವುಗಳ ವಿಲೇವಾರಿಗೆ ಕ್ರಮ ವಹಿಸಲಾಗಿದೆ ಎಂದರು.

ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಹುದಾದ ನಿಕೃಷ್ಟ ಕಾಯಿದೆಯಲ್ಲ ಇದು. ಅತ್ಯಂತ ಬಲಶಾಲಿಯಾದ ಕಾಯ್ದೆ. ಈ ಕಾಯ್ದೆಯ ಪರಿಣಾಮಗಳು ಹಾಗೂ ಬದಲಾವಣೆಗಳು ಸಮಾಜದಲ್ಲಿ ಕಂಡುಬಂದಿವೆ. ಜಿಲ್ಲೆಯ ನಿವೃತ್ತ ಅಧಿಕಾರಿಗಳು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸ್ವೀಕೃತಗೊಂಡಾಗ ಅಧಿಕಾರಿಗಳು ತಾಯಿಯ ಸ್ಥಾನದಲ್ಲಿರಬೇಕು. ಅರ್ಜಿ ಬಂದ ಕೂಡಲೇ ಸಮಸ್ಯೆ ಇದೆ ಎಂದು ಉಡಾಫೆ ಮಾಡಬಾರದು. ನಿಗದಿ ಪಡಿಸಿದ ಅವಧಿಯಲ್ಲಿ ಮಾಹಿತಿದಾರನಿಗೆ ಲಭ್ಯವಿರುವ ಮಾಹಿತಿ ನೀಡಬೇಕು, ತಪ್ಪಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ 25 ಸಾವಿರ ರೂಪಾಯಿವರೆಗೆ ದಂಡವಿಧಿಸುವುದರೊಂದಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page