August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ–ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪ್ರಾರಂಭಕ್ಕೆ ಶಾಸಕ ಅಶೋಕ್ ರೈ ಮನವಿ

ಮಾಣಿ–ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ (NH 275) ಕಾಮಗಾರಿ ಶೀಘ್ರ ಪ್ರಾರಂಭವಾಗುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿ ನರೇಂದ್ರ ಶರ್ಮರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 17ರಂದು ಬುಧವಾರ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, “ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಹೆದ್ದಾರಿ ಕಾಮಗಾರಿ ಪ್ರಾರಂಭವಾದರೆ ಈ ಭಾಗದ ಅಭಿವೃದ್ಧಿಗೆ ದೊಡ್ಡ ಮುನ್ನಡೆಯಾಗುತ್ತದೆ. ಈ ಹಿಂದೆಲೇ ಕಾಮಗಾರಿ ಆರಂಭವಾಗಬೇಕಿತ್ತು. ಈಗ ರಾಜ್ಯ ಸರ್ಕಾರವು 3.10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಮಾಡಿ ಡಿಪಿಆರ್ ಸಿದ್ಧಪಡಿಸಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕ ಯೋಜನೆಗೆ ಸೇರ್ಪಡೆ ಮಾಡಿ ಶೀಘ್ರ ಕಾಮಗಾರಿ ಆರಂಭಿಸಬೇಕು” ಎಂದು ಹೇಳಿದರು.

“ಕಾಮಗಾರಿ ವಿಳಂಬವಾಗಬಾರದು. ಆದಷ್ಟು ಬೇಗ ಕಾಮಗಾರಿ ಆರಂಭವಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಲಿ”ಎಂದು ಪುತ್ತೂರು ಶಾಸಕ ಅಶೋಕ್ ರೈ ಆಶಾಭಾವನೆ ವ್ಯಕ್ತಪಡಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page