July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘Karavali_tigers’ ಪ್ರಚೋದನಕಾರಿ ಸಂದೇಶ ಪ್ರಕರಣ – ತಮಿಳುನಾಡಲ್ಲಿ ಆರೋಪಿತ ಬಂಧನ

ಸಾಮಾಜಿಕ ಜಾಲತಾಣದಲ್ಲಿ ‘Karavali_tigers’ ಎಂಬ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪಿತನನ್ನು ಮಂಗಳೂರು ನಗರ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯವರು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಿಲ್ಲೂರು ಮನೆ, ಮಾಲವಂತಿಗೆ ಎಂಬಲ್ಲಿನ 22 ವರ್ಷ ಪ್ರಾಯದ ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ಇದೇ ಜುಲೈ 19ರಂದು ಮಂಗಳೂರು ನಗರದಲ್ಲಿ ಆರೋಪಿತನು ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದ ವಿಷಯ ದಾಖಲಾಗಿ ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಪೊಲೀಸರು, ಆರೋಪಿತನು ತಮಿಳುನಾಡಿನಲ್ಲಿ ಅಡಗಿರುವುದನ್ನು ಪತ್ತೆ ಮಾಡಿ, ಅಲ್ಲಿಗೆ ತೆರಳಿ ವಶಕ್ಕೆ ಪಡೆದು ಮಂಗಳೂರಿಗೆ ತರಲಾಯಿತು. ಬಳಿಕ ಆರೋಪಿತನನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ಪೇಜ್‌ ವಿರುದ್ಧ ಮಂಗಳೂರು ಬಜ್ಪೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪೊಲೀಸರ ಎಚ್ಚರಿಕೆ: ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು, ಪ್ರಚೋದನಕಾರಿ ಅಥವಾ ಕಾನೂನುಬಾಹಿರ ಸಂದೇಶಗಳನ್ನು ಹಂಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳು ಕಾನೂನುಪ್ರಕಾರ ಗಂಭೀರ ಅಪರಾಧವಾಗಿದ್ದು, ಭವಿಷ್ಯದಲ್ಲಿ ಯಾರೂ ಈ ರೀತಿಯ ಕೃತ್ಯಕ್ಕೆ ಕೈ ಹಾಕಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page