July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ – 13 ಶ್ರೇಷ್ಠ ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 13 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ ಅಭಿನಂದಿಸಿದರು.
ಭಜನೆ ಮಾಡುವಾಗ ಪರಿಶುದ್ಧ ತನು, ಮನದಿಂದ ದೃಢಸಂಕಲ್ಪದೊಂದಿಗೆ ಯಾವುದೇ ರೀತಿಯ ಚಿಂತೆ, ಸಂಕೋಚ ಇಲ್ಲದೆ ಭಕ್ತಿ ಹಾಗೂ ಉತ್ಸಾಹದಿಂದ ಮಾಡಬೇಕು ಎಂದು ಅವರು ಸಲಹೆ ನೀಡಿದರು.


ಎಲ್ಲಾ ಭಜನಾ ಮಂಡಳಿಗಳ ಸೇವಾ ಕಳಕಳಿ ಮತ್ತು ಬದ್ಧತೆಯನ್ನು ಶ್ಲಾಘಿಸಿದ ಅವರು ಹಿಂದೆ ಎಲ್ಲಾ ಕಡೆಗಳಲ್ಲಿ “ಜನ ಮರುಳೋ, ಜಾತ್ರೆ ಮರುಳೋ” ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಈಗ ಎಲ್ಲೆಡೆ ಭಜನಾ ಮಂಡಳಿಗಳಿಂದಾಗಿ ಎಲ್ಲಾ ಊರುಗಳಲ್ಲಿ ನಡೆಯುವ ಜಾತ್ರೆ, ಉತ್ಸವ, ಸಭೆ-ಸಮಾರಂಭ, ಹಬ್ಬ ಹರಿದಿನಗಳಲ್ಲಿ ಶಿಸ್ತು, ಸಂಯಮ, ಸ್ವಚ್ಛತೆ, ಬದ್ಧತೆ ಹಾಗೂ ಸೇವಾ ಕಳಕಳಿ ಕಂಡುಬರುತ್ತಿರುವುದು ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡಿದೆ ಎಂದು ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ವಿಶೇಷವಾಗಿ ಭಜನೆಯಲ್ಲಿ ಪುಟ್ಟಮಕ್ಕಳ ಪ್ರತಿಭೆ, ಆಸಕ್ತಿ ಮತ್ತು ಉತ್ಸಾಹವನ್ನು ಅವರು ಶ್ಲಾಘಿಸಿದರು.
ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಮತ್ತು ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹಾಗೂ ಎಲ್ಲಾ ಪದಾಧಿಕಾರಿಗಳ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.


ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತು ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಇದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಮಂಡಳಿಗಳ ಸೇವೆ, ಸಾಧನೆಯನ್ನು ಸಾದರಪಡಿಸಿದರು.
ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ಸ್ವಾಗತಿಸಿದರು. ಭಜನಾ ಪರಿಷತ್‌ನ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಧನ್ಯವಾದವಿತ್ತರು. ವಕೀಲ ಕೇಶವ ಗೌಡ ಕಾರ್ಯಕ್ರಮ ನಿರ್ವಹಿಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page