April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಂಗ್ರೆಸ್‌ ನಾಯಕರ ಪರಿಶ್ರಮ ಮತ್ತು ಸಾಮರ್ಥ್ಯಕ್ಕೆ ಸರಕಾರದಿಂದ ಗೌರವ

ಅಭಿವೃದ್ಧಿಶೀಲ ರಾಷ್ಟ್ರ ನಿರ್ಮಾಣದಲ್ಲಿ ಅಪಾರ ಅನುಭವ ಹೊಂದಿದ್ದ ಕಿನ್ನಿಗೋಳಿಯ ಶಾಲೆಟ್ ಪಿಂಟೋರವರಿಗೂ ಸೂಕ್ತ ಸ್ಥಾನ

ಕರ್ನಾಟಕ ಪರಿಸರ ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕ

ಸದಾ ಪರಿಶ್ರಮ, ಪ್ರಾಮಾಣಿಕತೆ, ಸಾಮರ್ಥ್ಯ ಮತ್ತು ನಿಷ್ಠೆಯನ್ನು ಮಾನ್ಯತೆ ಮಾಡುತ್ತಾ ವಿವಿಧ ಹುದ್ದೆಗಳಿಗೆ ನಾಯಕರನ್ನು ಕಾಂಗ್ರೆಸ್ ಪಕ್ಷವು ಆಯ್ಕೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರಿಗೆ ಮೆಸ್ಕಾಂ ಅಧ್ಯಕ್ಷ ಹುದ್ದೆಯನ್ನು, ಎಂ. ಎ. ಗಫೂರ್ ಅವರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಯನ್ನು,  ಮುದ್ರಾಡಿ ಮಂಜುನಾಥ ಪೂಜಾರಿಯವರಿಗೆ ನಾರಾಯಣಗುರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಯನ್ನು ರಾಜ್ಯ ಸರಕಾರ ಘೋಷಿಸಿದೆ.

ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಯನ್ನಾಗಿ ಕಿನ್ನಿಗೋಳಿಯ ಶಾಲೆಟ್ ಪಿಂಟೋರವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಅಭಿವೃದ್ಧಿಶೀಲ ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ವಿಶಿಷ್ಟ ಸಾಮರ್ಥ್ಯ ಹಾಗೂ ಅನುಭವವನ್ನು ಹೊಂದಿರುವ ಶಾಲೆಟ್ ಪಿಂಟೋ ಅವರ ನೇಮಕವನ್ನು ಕಾಂಗ್ರೆಸ್ ಪಕ್ಷದವರು ಸಂತೋಷದಿಂದ ಸ್ವಾಗತಿಸಿದ್ದಾರೆ.

ಅಂಜಲೋರ್ ಚರ್ಚ್ ನಲ್ಲಿ ಜನಿಸಿದ ಶಾಲೆಟ್ ಪಿಂಟೊ, ಅಂಬ್ರೋಸ್ ವಾಸ್ ಹಾಗೂ ಲೀನಾ ವಾಸ್ ದಂಪತಿಯ ಪುತ್ರಿಯಾಗಿದ್ದಾರೆ. ಎಸ್.ಡಿ.ಎಂ. ಲಾ ಕಾಲೇಜಿನಲ್ಲಿ ಬಿ.ಎ. ಲಾ, ಎಲ್.ಎಲ್.ಬಿ. ಪದವಿ ಪಡೆದಿರುವ ಇವರು, ಕಿನ್ನಿಗೋಳಿಯ ಜೊಸ್ಸಿ ಪಿಂಟೋರವರನ್ನು ವಿವಾಹವಾಗಿದ್ದಾರೆ. ಜೊಸ್ಸಿ ಪಿಂಟೋರವರು ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಿನ್ನಿಗೋಳಿ ವಲ್ಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಹಿನ್ನಲೆಯಲ್ಲಿ ಶಾಲೆಟ್ ಪಿಂಟೋ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು, 1997ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ. 2015ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಇವರು, ಕಳೆದ ಒಂಬತ್ತು ವರ್ಷಗಳ ಕಾಲ ಪರಿಶ್ರಮಪೂರ್ವಕವಾಗಿ ಪಕ್ಷವನ್ನು ಬಲಪಡಿಸಿದರು.

ಅವರ ಪರಿಶ್ರಮ, ಪ್ರಾಮಾಣಿಕತೆ ಮತ್ತು ಪಕ್ಷ ನಿರ್ಮಾಣದ ಶ್ರದ್ಧೆಯನ್ನು ಪರಿಗಣಿಸಿ, ರಾಜ್ಯ ಸರ್ಕಾರವು ಅವರನ್ನು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷವು ಸದಾ ಪರಿಶ್ರಮ, ಪ್ರಾಮಾಣಿಕತೆ, ಸಾಮರ್ಥ್ಯ ಮತ್ತು ನಿಷ್ಠೆಯನ್ನು ಮಾನ್ಯತೆ ನೀಡುತ್ತಾ ವಿವಿಧ ಹುದ್ದೆಗಳಿಗೆ ನಾಯಕರನ್ನು ಆಯ್ಕೆ ಮಾಡುವುದಾಗಿ ತಿಳಿಸಿದೆ.

You may also like

News

ಧರ್ಮಸ್ಥಳದಲ್ಲಿ 54ನೇ ವರ್ಷದ ಸಾಮೂಹಿಕ ವಿವಾಹ – 106 ಜೋಡಿಗಳ ದಾಂಪತ್ಯ ಆರಂಭ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 29ರಂದು ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
News

Saint Theresa’s School Mangaluru Records 22nd Consecutive Year of 100% Success in ICSE Class X Exams 2025–26

Principal Sr Lourdes  and faculty congratulate students on their success MANGALURU: In a resounding celebration of intellectual brilliance and disciplined

You cannot copy content of this page