July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇವಸ್ಥಾನಗಳ ಭದ್ರತೆಗೆ ಭಟ್ಕಳ ಗ್ರಾಮೀಣ ಪೊಲೀಸರ ಮುಂದಾಳತ್ವ – ಸಿಸಿ ಕ್ಯಾಮರಾ ಕಡ್ಡಾಯ, ಒಮ್ಮತದ ನಿರ್ಧಾರ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಇತ್ತೀಚಿನ ಹುಂಡಿ ಕಳ್ಳತನ ಪ್ರಕರಣಗಳ ಹಿನ್ನೆಲೆ ಈ ನಿರ್ಧಾರ ಜಾರಿಗೊಳಿಸಲಾಗಿದೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಸ್ಥಾನಗಳ ಕಮಿಟಿ ಸದಸ್ಯರ ಸಭೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರು ಮಾತನಾಡಿ, “ಸಿಸಿ ಕ್ಯಾಮರಾ ಅಳವಡಿಕೆಯಿಂದ ಹುಂಡಿ ಕಳ್ಳತನ ಮತ್ತು ಸ್ವತ್ತಿನ ಅಪರಾಧಗಳನ್ನು ತಡೆಯಲು ನೆರವಾಗುತ್ತದೆ. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳನ್ನು ದಾಖಲಿಸಲು ಸಹಾಯಕವಾಗುತ್ತದೆ. ತನಿಖಾ ಕಾರ್ಯಕ್ಕೆ ಸ್ಪಷ್ಟವಾದ ಸಾಕ್ಷ್ಯ ದೊರೆಯುತ್ತದೆ. ಭಕ್ತರ ವಿಶ್ವಾಸ ಹೆಚ್ಚಿಸಿ ದೇವಸ್ಥಾನದ ಭದ್ರತೆಯನ್ನು ಬಲಪಡಿಸುತ್ತದೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಸೂಡಿಗದ್ದೆ ದುರ್ಗಾಪರಮೇಶ್ವರಿ, ಕಂಚಿನ ದುರ್ಗಾಪರಮೇಶ್ವರಿ, ಸೇಡ ಬದಿ ಸೇರಿದಂತೆ ಠಾಣಾ ವ್ಯಾಪ್ತಿಯ ಹಲವು ದೇವಸ್ಥಾನಗಳ ಕಮಿಟಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು, ಎಲ್ಲಾ ದೇವಸ್ಥಾನಗಳಿಗೆ ಶೀಘ್ರದಲ್ಲೇ ಸಿಸಿ ಕ್ಯಾಮರಾ ಅಳವಡಿಸಲು ಒಮ್ಮತದಿಂದ ತೀರ್ಮಾನಿಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page