August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭ್ರಷ್ಟಾಚಾರ ಪ್ರಕರಣದಲ್ಲಿ ಪುತ್ತೂರು ತಹಶೀಲ್ದಾರ್ ಕೂಡಲಗಿ ಜಾಮೀನು ಅರ್ಜಿ ವಜಾ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಣೆಯಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಎಸ್.ಎಂ ಮತ್ತು ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988ರಡಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಟ್ರ್ಯಾಪ್ ಕಾರ್ಯಾಚರಣೆ ಸಮಯದಲ್ಲಿ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಅವರು ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಆದರೆ, ತಹಶೀಲ್ದಾರ್ ಕೂಡಲಗಿ ಅವರು ತಲೆಮರೆಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಕೂಡಲಗಿ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಸುನೀತಾ ಎಸ್.ಜಿ. ಅವರು ವಿಚಾರಣೆ ನಡೆಸಿ, ಜಾಮೀನು ನಿರಾಕರಿಸಿ ತೀರ್ಪು ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತ, ಮಂಗಳೂರು ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ರವೀಂದ್ರ ಮುನ್ನಿಪ್ಪಾಡಿಯವರು ವಾದ ಮಂಡಿಸಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page