July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಧರ್ಮಕ್ಷೇತ್ರದ ಸಿಟಿ ವಲಯದ 8ನೇ ತರಗತಿಯ ಮಕ್ಕಳಿಗೆ ಶಿಸ್ತು, ಆತ್ಮವಿಶ್ವಾಸದ ಪಾಠ

ಮಕ್ಕಳ ಜೀವನ ಮೌಲ್ಯ ಬೆಳೆಸುವ ‘ಜೀವನ್ ದಿಶಾ’ ಶಿಬಿರ

ಮಂಗಳೂರು ಧರ್ಮಕ್ಷೇತ್ರದ ಸಿಟಿ ವಲಯಕ್ಕೆ ಸೇರಿರುವ 12 ಚರ್ಚ್‌ಗಳ 8ನೇ ತರಗತಿಯ ಕ್ರೈಸ್ತ ಶಿಕ್ಷಣದ ಮಕ್ಕಳಿಗಾಗಿ ಒಂದು ದಿನದ ‘ಜೀವನ್ ದಿಶಾ’ ಶಿಬಿರವು ವಾಮಂಜೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭವ್ಯವಾಗಿ ನಡೆಯಿತು.

ವಾಮಂಜೂರು ಚರ್ಚ್‌ನ ಸಹಾಯಕ ಧರ್ಮಗುರು ವಂದನೀಯ ಫಾದರ್ ಜೀವನ್ ಶೈಲೇಶ್ ಲೋಬೊ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ಭವಿಷ್ಯ ಜೀವನದ ದೃಷ್ಟಿಯಿಂದ ಶಿಸ್ತು, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಮಾಜಸೇವಾ ಮನೋಭಾವ ಇವುಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಮುಖ್ಯವೆಂದು ತಿಳಿಸಿದರು. ಮಕ್ಕಳು ಈಗಿನಿಂದಲೇ ತಮ್ಮಲ್ಲಿರುವ ಪ್ರತಿಭೆಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಅವರು ಸಲಹೆ ನೀಡಿದರು.

ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ, ನೈತಿಕತೆ, ಆತ್ಮೀಯತೆ, ಸಾಮಾಜಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ತಿಳಿಸಲಾಯಿತು. ಇದಲ್ಲದೇ ಆಟ, ಗುಂಪು ಚಟುವಟಿಕೆಗಳು ಹಾಗೂ ಚರ್ಚೆಗಳ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ ಹಾಗೂ ನಾಯಕತ್ವ ಗುಣವನ್ನು ಬೆಳೆಸುವ ಉದ್ದೇಶ ಈ ಶಿಬಿರದಲ್ಲಿ ಇತ್ತು.

 

ಶಿಬಿರದ ಸಮಾರೋಪ ಸಮಾರಂಭದಲ್ಲಿ ವಾಮಂಜೂರು ಚರ್ಚ್‌ನ ಪ್ರಧಾನ ಧರ್ಮಗುರು ಹಾಗೂ ಸಿಟಿ ವಲಯದ ಶ್ರೇಷ್ಠ ಗುರು ಅತೀ ವಂದನೀಯ ಫಾದರ್ ಜೇಮ್ಸ್ ಡಿಸೋಜರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 12 ಚರ್ಚ್‌ಗಳ ಕ್ರೈಸ್ತ ಶಿಕ್ಷಣ ಸಂಯೋಜಕರೂ ಭಾಗವಹಿಸಿ ಮಕ್ಕಳಿಗೆ ಹಾರೈಕೆ ಸಲ್ಲಿಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page