CITU ನೂತನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಬಿ. ಎಂ. ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಸರ್ವಾನುಮತದಿಂದ ಆಯ್ಕೆ

ಕೇಂದ್ರ ಕಾರ್ಮಿಕ ಸಂಘಟನೆಯಾದ CITU ನ 18ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಅಕ್ಟೋಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಕಾರ್ಮಿಕ ವರ್ಗಕ್ಕೆ ಭಾಧಿಸುವ ಹಲವಾರು ಅಂಶಗಳ ಬಗ್ಗೆ ನಿರ್ಣಯಗಳನ್ನು ಕೈಗೊಂಡ ಸಮ್ಮೇಳನವು ಮುಂಬರುವ ದಿನಗಳಲ್ಲಿ ಪ್ರಬಲ ಹೋರಾಟಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿತು. ಸಮ್ಮೇಳನವು ಮುಂದಿನ ಮೂರು ವರ್ಷಕ್ಕೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.
ನೂತನ ಜಿಲ್ಲಾಧ್ಯಕ್ಷರಾಗಿ ಬಿ. ಎಂ. ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಹಾಗೂ ಖಜಾಂಚಿಯಾಗಿ ಯೋಗೀಶ್ ಜಪ್ಪಿನಮೊಗರು ಅವರನ್ನು ಸರ್ವಾನುಮತದಿಂದ ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ ಜೆ. ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ಯಾದವ ಶೆಟ್ಟಿ, ಸುಂದರ ಕುಂಪಲ, ನೋಣಯ್ಯ ಗೌಡ ಹಾಗೂ ಕಾರ್ಯದರ್ಶಿಗಳಾಗಿ ರಾಧಾ ಮೂಡಬಿದ್ರೆ, ರವಿಚಂದ್ರ ಕೊಂಚಾಡಿ, ಗಿರಿಜಾ ಮೂಡಬಿದ್ರೆ, ಬಿ. ಕೆ. ಇಮ್ತಿಯಾಜ್, ವಸಂತಿ ಕುಪ್ಪೆಪದವು, ಲೋಕಾಕ್ಷಿ ಬಂಟ್ವಾಳ, ಈಶ್ಬರೀ ಬೆಳ್ತಂಗಡಿ, ರೋಹಿದಾಸ್ ಭಟ್ನಗರ, ಭವ್ಯಾ ಮುಚ್ಚೂರುರವರು ಆಯ್ಕೆಗೊಂಡರು. ಜಿಲ್ಲಾ ಸಮಿತಿ ಸದಸ್ಯರುಗಳಾಗಿ ವಿವಿಧ ಯೂನಿಯನ್ ಹಾಗೂ ಸಂಘಟನೆಗಳ 35 ಮಂದಿ ಪ್ರಮುಖ ನಾಯಕರುಗಳನ್ನು ಆರಿಸಲಾಯಿತು.