ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 13ರಂದು ಸೋಮವಾರ ಚುನಾವಣಾ ಅಧಿಸೂಚನೆ ಹಾಗೂ ಮತದಾರರ ಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ) ಅಕ್ಟೋಬರ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.


ಅಕ್ಟೋಬರ್ 28 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವಂಬರ್ 9ರಂದು ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3ಗಂಟೆ ವರೆಗೆ ವಾರ್ತಾ ಭವನದಲ್ಲಿ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.




