July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿಯ ಭ್ರಷ್ಟ RTO ಅಧಿಕಾರಿಯ ಮನೆಯಲ್ಲಿ ಕೋಟ್ಯಾಂತರ ರೂಪಾಯಿ, ನಗದು ಚಿನ್ನ, ಬೆಳ್ಳಿ ಪತ್ತೆ

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ. ನಾಯಕ್ ರವರ ಕಚೇರಿ, ಮನೆ, ಆಪ್ತರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಅಕ್ಟೋಬರ್ 14ರಂದು ಮಂಗಳವಾರ ಬೆಳಗ್ಗಿನ ಜಾವ ಏಕಕಾಲದಲ್ಲಿ ಐದು ಕಡೆಯಲ್ಲಿ ದಾಳಿ ನಡೆಸಿದ್ದರು.

ಅಕ್ರಮ ಆಸ್ತಿ ಪಾಸ್ತಿಗಳನ್ನು ಹೊಂದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಸಂಗ್ರಹಿಸಿದ ಲೋಕಾಯುಕ್ತ ಪೊಲೀಸರು, ಈ ಸಂಬಂಧ ಆರ್‌ಟಿಓ ಲಕ್ಷ್ಮೀನಾರಾಯಣ ನಾಯಕ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮಂಗಳೂರು ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖಾಧಿಕಾರಿ ಉಡುಪಿ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ ನೇತೃತ್ವದಲ್ಲಿ ಮಂಗಳೂರು ಡಿವೈಎಸ್ಪಿ ಗಾನ ಪಿ. ಕುಮಾರ್, ಕಾರವಾರ ಡಿವೈಎಸ್ಪಿ ಧನ್ಯ ನಾಯಕ್, ಪೊಲೀಸ್ ನಿರೀಕ್ಷಕರುಗಳಾದ ರಾಜೇಂದ್ರ ನಾಯ್ಕ ಎಂ.ಎನ್., ಚಂದ್ರಶೇಖರ್ ಕೆ.ಎನ್., ಭಾರತಿ, ರವಿ ಎನ್.ಎನ್. ಹಾಗೂ ಸಿಬ್ಬಂದಿಯವರನ್ನು ಒಳಗೊಂಡ ಒಟ್ಟು 5 ತಂಡ ಈ ದಾಳಿ ನಡೆಸಿದೆ.

ಆರ್‌ಟಿಓಗೆ ಸಂಬಂಧಿಸಿದ ವಾಸ್ತವ್ಯದ ಮನೆ, ಸಂಬಂಧಿಕರ ಮನೆ, ಆಪ್ತ ಬೋಕರ್ ರವಿ ಶೇರಿಗಾರ್ ಅಲೆವೂರು ಇತನ ಮನೆ ಮತ್ತು ಕಚೇರಿ ಹಾಗೂ ಆರ್‌ಟಿಓ ಕಛೇರಿ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು ಶೋಧನಾ ಕಾರ್ಯವು ರಾತ್ರಿಯವರೆಗೂ ಮುಂದುವರೆದಿದೆ.

ಈವರೆಗೆ ನಡೆಸಲಾದ ಶೋಧ ಕಾರ್ಯದಲ್ಲಿ 2 ಮನೆಗಳು, ವಿವಿಧ ಸರ್ವೆ ನಂಬರಗಳಲ್ಲಿ 3 ನಿವೇಶನ, ಚಿನ್ನ, ಬೆಳ್ಳಿ, ಗೃಹೋಪಯೋಗಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಗಳಲ್ಲಿರುವ ಒಟ್ಟು ಮೌಲ್ಯ ಸೇರಿದಂತೆ ಒಟ್ಟು ಅಂದಾಜು 2,21,14,234ರೂಪಾಯಿ ಕಂಡು ಬಂದಿದ್ದು ಶೇಕಡಾ 133.31ರಷ್ಟು ಅಕ್ರಮ ಆಸ್ತಿಪಾಸ್ತಿಗಳಿರುವುದು ಪತ್ತೆಯಾಗಿದೆ.

ತನಿಖೆ ಮುಂದುವರೆದಿದ್ದು, ಆರ್‌ಟಿಓ ಹೊಂದಿರುವ 1 ಬ್ಯಾಂಕ್ ಲಾಕರ್, ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಹಾಗೂ ಸಂಬಂಧಪಟ್ಟ ಇನ್ನು ಹೆಚ್ಚಿನ ಸ್ಥಳಗಳ ಮಾಹಿತಿ ಸಂಗ್ರಹಣೆ ಮುಂದುವರೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page