July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ, ಬಂಟ್ವಾಳ ಪೊಲೀಸ್ ಠಾಣಾ ಸಹಿತ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಧನ

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ  32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್ ಫಾರೂಕ್ ಕೊನೆಗೂ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಬಂಟ್ವಾಳ ತಾಲೂಕಿನ ಮದ್ವ ಪ್ರದೇಶದಲ್ಲಿ ಅಕ್ಟೋಬರ್ 15ರಂದು ಬುಧವಾರ ಬಂಧಿಸಲ್ಪಟ್ಟ ಈತನನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಈತನ ವಿರುದ್ಧ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ ಮತ್ತು ಬಜಪೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಬಹುತೇಕವು ಮನೆ ಕಳವು, ದರೋಡೆ ಹಾಗೂ ಆಸ್ತಿ ಕಳವು ಪ್ರಕರಣಗಳಾಗಿವೆ.

ಉಪ್ಪಿನಂಗಡಿ ಠಾಣೆಯ ಅ.ಕ್ರ. 38/2020, 39/2020, 48/2012, 119/2020 ಹಾಗೂ ಕಡಬ ಠಾಣೆಯ 43 ರಿಂದ 46/2020 ರವರೆಗೆ ದಾಖಲಾಗಿರುವ ಪ್ರಕರಣಗಳಲ್ಲಿ ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ 457, 380, 201, 34 ಮುಂತಾದ ಕಲಂಗಳ ಅಡಿಯಲ್ಲಿ ಆರೋಪಗಳು ದಾಖಲಾಗಿವೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page