November 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಲಿಕುಳ ನಿಸರ್ಗಧಾಮದಲ್ಲಿ ಲೋಕಾಯುಕ್ತರ ಅನಿರೀಕ್ಷಿತ ದಾಳಿ

ನಿರ್ವಹಣಾ ಲೋಪದೋಷಗಳ ಪತ್ತೆ – ತನಿಖೆ ಮುಂದುವರಿಕೆ

ಮಾನಸ ವಾಟರ್ ಪಾರ್ಕ್, ಮೃಗಾಲಯ ಸೇರಿದಂತೆ ಇತರ ಕಡೆಗಳಲ್ಲಿ  ಅವ್ಯವಹಾರ ಕಂಡು ಬಂದಲ್ಲಿ ಕೂಡಲೆ ಲೋಕಾಯುಕ್ತಕ್ಕೆ ದೂರು ನೀಡಲು ಸೂಚನೆ

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಅಕ್ಟೋಬರ್ 16ರಂದು ಗುರುವಾರ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಚಾನಕ್‌ ಸರ್ಚ್ ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ. ಕುಮಾರ್ ಅವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ರವಿ ಪೀರು ಪವಾರ್, ಸುರೇಶ್ ಕುಮಾರ್ ಪಿ. ಹಾಗೂ ಉಡುಪಿ ಲೋಕಾಯುಕ್ತದ ರಾಜೇಂದ್ರ ನಾಯ್ಕ್ ಎಂ.ಎನ್. ಸೇರಿದಂತೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತು.

ಪರಿಶೀಲನೆಯ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪದೋಷಗಳು ಪತ್ತೆಯಾಗಿದ್ದು, ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್ ಹಾಗೂ ಸೈನ್ಸ್ ಮ್ಯೂಸಿಯಂ ಸೇರಿದಂತೆ ಅನೇಕ ಘಟಕಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಯಾವುದೇ ಅಕ್ರಮ ಅಥವಾ ಅವ್ಯವಹಾರಗಳ ಬಗ್ಗೆ ಮಾಹಿತಿ ನೀಡಲು ಲೋಕಾಯುಕ್ತ ಕಚೇರಿಯ ☎️ 0824-2950997 ಗೆ ಕರೆ ಮಾಡಬಹುದು ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ  (ಪ್ರಭಾರ) ಕುಮಾರಚಂದ್ರರವರು ತಿಳಿಸಿದ್ದಾರೆ.

You may also like

News

Parents Urged to Make Faith the Foundation of Family Life at Mangalore Diocese DPP Meet

Awardees and Achievers Honoured for National, State and District-Level Excellence The Diocese of Mangalore, at its second Diocesan Pastoral Parishad
News

ಸಾಧಕರಿಗೆ ಸನ್ಮಾನ ಹಾಗೂ ಸೌಹಾರ್ದತೆಗೆ ಸಂಭ್ರಮದ ವೇದಿಕೆ – MPMLA NEWS ಇದರ 14ನೇ ಸೌಹಾರ್ದ ಸಂಗಮ

ನಾಳೆ ನವಂಬರ್ 24ರಂದು ಮಂಗಳೂರು ಟೌನ್‌ಹಾಲ್‌ನಲ್ಲಿ ಅದ್ದೂರಿ ಕಾರ್ಯಕ್ರಮ ಮಂಗಳೂರು: ಸಮಾಜದಲ್ಲಿ ಸೌಹಾರ್ದತೆ, ಮಾನವೀಯ ಮೌಲ್ಯಗಳು ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಡಾ. ಅಶೋಕ್ ಶೆಟ್ಟಿ

You cannot copy content of this page