May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮಕ್ಕೆ ಮುಂದಾಗಿದೆ. ಅದರಂತೆ ಕಳೆದೊಂದು ತಿಂಗಳಿನಿಂದ ಐದು ಅಪರಾಧ ಪ್ರಕರಣಗಳಲ್ಲಿ ಭದ್ರತೆಗಾಗಿ ಇರಿಸಲಾಗಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಎರಡು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯ ದಂಡ ವಿಧಿಸಿದೆ. ನಾಲ್ಕು ಪುಕರಣಗಳ ಆಸ್ತಿ ಮುಟ್ಟುಗೋಲು ಪಕ್ರಿಯೆ ಚಾಲ್ತಿಯಲ್ಲಿದೆ. ಈ ಕಾರ್ಯಾಚರಣೆ ಆರಂಭವಾದ ಬಳಿಕ ಎರಡು ಪಕರಣಗಳಲ್ಲಿ ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಳಿಕ ಕೆಲವು ಪುಕರಣಗಳ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಈ ಆರೋಪಿಗಳ ಪರವಾಗಿರುವ ಜಾಮೀನುದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೆ ನ್ಯಾಯಾಲಯದ ಆದೇಶ ಪಡೆದು ಜಾಮೀನುದಾರರಿಗೆ ಸಂಬಂಧಿಸಿದ ಸೊತ್ತುಗಳನ್ನು ಮುಟ್ಟುಗೋಲು ಹಾಕಲು ಮತ್ತು ದಂಡ ವಸೂಲಿ ಮಾಡಲು ಕ್ರಮಕೈಗೊಳ್ಳುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗಿದೆ. ಮುಟ್ಟುಗೋಲು ಮಾಡಲಾಗಿರುವ ಆಸ್ತಿಯ RTCಯಲ್ಲಿ ವಿವರಗಳನ್ನು ನಮೂದಿಸಲಾಗಿದೆ. ಕೆಲವು ಪುಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page