July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಷಕರಿಗೆ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕನ ಬಂಧನ

ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ ಎಂಬವರು, ವಿದ್ಯಾರ್ಥಿಯೊಬ್ಬ ಪೋಷಕರಿಗೆ ಕರೆ ಮಾಡಿದಕ್ಕಾಗಿ ಆತನನ್ನು ನೆಲಕ್ಕೆ ತಳ್ಳಿ ಎಲ್ಲೆಂದರಲ್ಲಿ ಮನಬಂದಂತೆ ಒದ್ದಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ ನಾಪತ್ತೆಯಾಗಿದ್ದ ಈತನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದಾರೆ. ಬಳಿಕ ತಡರಾತ್ರಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಅಲ್ಲದೆ ಶಿಕ್ಷಕ ವೀರೇಶ್ ಹಿರೇಮ‌ಠನನ್ನು ಅಮಾನತುಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ರವರು ಆದೇಶ ಹೊರಡಿಸಿದ್ದಾರೆ.

 

You may also like

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at

You cannot copy content of this page