July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಅಕ್ಟೋಬರ್ 24ರಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ 

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ನಾಳೆ ಅಕ್ಟೋಬರ್ 24ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನೆರವೇರಲಿದೆ.

ಭಗವಾನ್‌ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.

ಸಭಾ ಕಾರ್ಯಕ್ರಮ: ಸಂಜೆ 4:00 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕರುಗಳಾದ ಹರೀಶ್‌ ಪೂಂಜ, ಕೆ. ಪ್ರತಾಪಸಿಂಹ ನಾಯಕ್‌ ಮತ್ತು ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್‌ ಕುಮಾರ್‌ ಶುಭಾಶಂಸನೆ ಮಾಡುವರು. ಹಿರಿಯ ನೌಕರರ ಸನ್ಮಾನ ಹಾಗೂ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸುವರು.

ಹಬ್ಬದ ವಾತಾವರಣ: ದೀಪಾವಳಿ ಹಬ್ಬದ ಜೊತೆಗೆ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಅಂಗವಾಗಿ ಎಲ್ಲೆಲ್ಲೂ ಸಂಭ್ರಮ, ಸಡಗರದ ವಾತಾವರಣವಿದೆ.
ಬಸದಿ, ದೇವಸ್ಥಾನ, ಹೆಗ್ಗಡೆಯವರ ನಿವಾಸ, ಅನ್ನಪೂರ್ಣ ಹಾಗೂ ವಸತಿ ಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳು ಮತ್ತು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಿದ್ದು, ಎಲ್ಲರ ಗಮನ ಸೆಳೆಯುತ್ತಿವೆ.

1968ರ ಅಕ್ಟೋಬರ್‌ 24ರಂದು ಧರ್ಮಸ್ಥಳದ 29ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್‌ ಸಂಸ್ಥೆಗಳು, ಕೆರೆಗಳಿಗೆ ಕಾಯಕಲ್ಪ, ಉಚಿತ ಸಾಮೂಹಿಕ ವಿವಾಹ ಸಮಾರಂಭ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹಾಗೂ ಆಯುರ್ವೇದಕ್ಕೆ ಪ್ರೋತ್ಸಾಹ, ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ, ರುದ್ರಭೂಮಿ ಮೊದಲಾದ ವಿನೂತನ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದ ಮೂಲಕ ಉನ್ನತ ಸೇವೆ-ಸಾಧನೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ.

You may also like

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at

You cannot copy content of this page