May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಯವರ ಬಗ್ಗೆ ಅಸಭ್ಯ ಪೋಸ್ಟ್

ಸುಳ್ಯ ಪೊಲೀಸರಿಂದ ಆರೋಪಿ ಬರಿಮಾರು ಪುರುಷೋತ್ತಮ ಆಚಾರ್ಯನ ಬಂಧನ

ಸಾಮಾಜಿಕ ಜಾಲತಾಣ Facebook ನಲ್ಲಿ “Purush Acharya” ಎಂಬ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ಹಾಗೂ ಮಾನ್ಯ ಮುಖ್ಯಮಂತ್ರಿಯವರ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದನಾತ್ಮಕ ಪೋಸ್ಟ್ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 112/2025 (ಕಲಂ 296, 196, 354 BNS) ಹಾಗೂ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ 55/2025 (ಕಲಂ 353(3), 353(4) BNS) ಅಡಿ ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸಹಕಾರದೊಂದಿಗೆ, ಸುಳ್ಯ ಪೊಲೀಸರು ಬಂಟ್ವಾಳ ತಾಲೂಕು ಬರಿಮಾರು ಮೂಲದ ಪುರುಷೋತ್ತಮ ಆಚಾರ್ಯ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page