May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಳ್ಳಾಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರು ಇಂದು ನವಂಬರ್ 02ರಂದು ಭಾನುವಾರ ಚಾಲನೆ ನೀಡಿದ್ದಾರೆ. ಉಳ್ಳಾಲದ ಉಳ್ಳಾಲಬೈಲ್ ವೈದ್ಯನಾಥ ನಗರದ 1ನೇ ಅಡ್ಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅದೇರೀತಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 18 ಲಕ್ಷ ರೂಪಾಯಿ ಅನುದಾನದಲ್ಲಿ ಉಳ್ಳಾಲದ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಸೋಮೇಶ್ವರ ಬೀಚ್‌ಗೆ ಭೇಟಿ ನೀಡುವವರ ಉಪಯೋಗಕ್ಕಾಗಿ ನಿರ್ಮಾಣಗೊಳ್ಳಲಿರುವ ಶೌಚಾಲಯದ ಗುದ್ದಲಿ ಪೂಜೆಯನ್ನು ಕೂಡ ಸಂಸದರು ನೆರವೇರಿಸಿದ್ದಾರೆ.

ಅಲ್ಲದೆ, ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ಎರಡು ಕೊಠಡಿಗಳ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಕೂಡ ಸಂಸದ ಕ್ಯಾಪ್ಟನ್ ಚೌಟರವರು ಇದೇ ಸಂದರ್ಭದಲ್ಲಿ ನೆರವೇರಿಸಿದ್ದಾರೆ.

ವಿಶ್ವ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿದ್ದ “ಯೋಗ ವಿತ್‌ ಯೋಧ” ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಚೌಟರವರು ಪಾಲ್ಗೊಂಡಿದ್ದರು. ಈ ವೇಳೆ, ದೇವಸ್ಥಾನದ ಆಡಳಿತ ಮಂಡಳಿಯವರು ಕೆಲವು ಮೂಲಸೌಕರ್ಯ ಒದಗಿಸುವ ಕುರಿತ ಬೇಡಿಕೆಯನ್ನು ಸಂಸದರಿಗೆ ಸಲ್ಲಿಸಿದ್ದರು. ಇದಕ್ಕೆ ಶೀಘ್ರವಾಗಿ ಸ್ಪಂದಿಸಿರುವ ಕ್ಯಾಪ್ಟನ್ ಚೌಟರವರು ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಗದೀಶ್ ಆಳ್ವ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಸೋಮೇಶ್ವರ ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ಕಮಲ ಮತ್ತು ರವಿಶಂಕರ್ ಸೋಮೇಶ್ವರ, ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಶೆಟ್ಟಿ, ಸೋಮೇಶ್ವರ ದೇವಸ್ಥಾನ ಟ್ರಸ್ಟಿ ಸದಾಶಿವ ಬಂಗೇರ, ಕಿಶೋರ್, ದೇವಸ್ಥಾನದ ಆಡಳಿತಾಧಿಕಾರಿ ಬೇಬಿ, ಬಿಜೆಪಿ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ದಿನೇಶ್ ಅಮ್ಟೂರು, ಚಂದ್ರಶೇಖರ ಉಚ್ಚಿಲ, ದಯಾನಂದ ತೊಕ್ಕೊಟ್ಟು, ನವೋದಯ ವಿದ್ಯಾಲಯ ಪ್ರಾಂಶುಪಾಲ ರಾಜೇಶ್, ಉಳ್ಳಾಲ ನಗರಸಭೆ ಸದಸ್ಯರು ಮತ್ತು ಸ್ಥಳೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page