August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಮುದ್ರಕ್ಕೆ ಸ್ನಾನಕ್ಕಿಳಿದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಮೃತ್ಯು

ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಸ್ನಾನ ಮಾಡುತ್ತಿದ್ದ ಬೆಂಗಳೂರು ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನವೆಂಬರ್‌ 2ರಂದು ಭಾನುವಾರ ನಡೆದಿದೆ. ಮೃತರನ್ನು ಅಫ್ನಾನ್‌ ಅಹ್ಮದ್, ರೆಹಾಸುದ್ದೀನ್ ಮತ್ತು ಅಫ್ರಾಸ್‌ ಎಂದು ಗುರುತಿಸಲಾಗಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ದುರಂತ ನಡೆದಿದೆ. ಈಜಲು 8 ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಾಗ ಜೋರಾದ ಅಲೆ ಬೀಸಿದ ಪರಿಣಾಮ ಈ ಪೈಕಿ ಮೂವರು ಮುಳುಗಿದರು. ಕೂಡಲೇ ಸ್ಥಳೀಯರ ಸಹಾಯದಿಂದ ಅವರನ್ನು ಮೇಲಕ್ಕೆಳೆದು ಆಸ್ಪತ್ರಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾವು ತಂಗಿದ್ದ ರೆಸಾರ್ಟ್‌ನ ಬಳಿ ಇರುವ ಬೀಚ್‌ಗೆ ವಿದ್ಯಾರ್ಥಿಗಳು ತೆರಳಿದ ವೇಳೆ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಅಫ್ರಾಸ್‌ ಸಮುದ್ರಕ್ಕೆ ಇಳಿದಿದ್ದ. ಆತ ಮುಳುಗುತ್ತಿರುವುದನ್ನು ನೋಡಿದ ಉಳಿದಿಬ್ಬರು ಅಫ್ನಾನ್‌, ರಹಾನುದ್ದೀನ್‌ ರಕ್ಷಣೆಗಾಗಿ ಮುಂದಾದರು. ಆದರೆ ಅವರು ಕೂಡ ನೀರಿನಲ್ಲಿ ಕೊಚ್ಚಿ ಹೋದರು. ಕೂಡಲೇ ದಡದಲ್ಲಿದ್ದ ಅವರ ಸ್ನೇಹಿತರು, ಸ್ಥಳೀಯರು ಮತ್ತು ಮೀನುಗಾರರಿಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ನಡೆಸಿದ ಕಾರ್ಯಾಚರಣೆಯ ಬಳಿಕ ಮೂವರ ಮೃತದೇಹ ಪತ್ತೆಯಾಯಿತು. ಮೃತರು ಚಿತ್ರದುರ್ಗ ಹಾಗೂ ಹಾಸನ ಜಿಲ್ಲೆಯ ವಿದ್ಯಾರ್ಥಿಗಳೆಂದು ಮಾಹಿತಿ ಲಭ್ಯವಾಗಿದೆ. ಮೂಲದವರೆಂದು ತಿಳಿದು ಬಂದಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ವಿದ್ಯಾರ್ಥಿಗಳು ರಜೆಯ ಹಿನ್ನೆಲೆಯಲ್ಲಿ ಪ್ರವಾಸ ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page