ಶಿವರಾಮ ಕಾಸರಗೋಡುರವರಿಗೆ ಚುಟುಕು ಸಾಹಿತ್ಯ ಪರಿಷತ್ತಿನ ಅಭಿನಂದನೆ
ಡಾ. ಸುರೇಶ ನೆಗಳಗುಳಿರವರ ಅಧ್ಯಕ್ಷತೆಯಲ್ಲಿ ನಡೆದ 14 ಭಾಷೆಗಳ ಬಹುಭಾಷಾ ಕವಿಗೋಷ್ಠಿ

ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನಿನ್ನೆ ನವೆಂಬರ್ 4ರಂದು ಮಂಗಳವಾರ ನಡೆದ ಶಿವರಾಮ ಕಾಸರಗೋಡುರವರ 60ನೇ ಜನ್ಮ ವರ್ಷಾಚರಣೆಯ ಸಂಭ್ರಮದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಶಿವರಾಮ ಕಾಸರಗೋಡುರವರನ್ನು ಸನ್ಮಾನಿಸಲಾಯಿತು.












ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಸುರೇಶ ನೆಗಳಗುಳಿ, ಕಾಸರಗೋಡು ಗಡಿನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ. ಸೋಮಶೇಖರ್ ಹಾಗೂ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ. ಮಂಜುನಾಥ ಸಾಗರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.



ಕಾರ್ಯಕ್ರಮದ ಬಳಿಕ ಡಾ. ಸುರೇಶ ನೆಗಳಗುಳಿರವರ ಅಧ್ಯಕ್ಷತೆಯಲ್ಲಿ 14 ಭಾಷೆಗಳ ಬಹುಭಾಷಾ ಕವಿಗೋಷ್ಠಿ ನಡೆಯಿತು. ಈ ಕವಿಗೋಷ್ಠಿಯಲ್ಲಿ ವಿವಿಧ ಭಾಷಾ ಕವಿಗಳು ತಮ್ಮ ಕಾವ್ಯ ರಚನೆಗಳ ಮೂಲಕ ಸಾಹಿತ್ಯ ಪ್ರೇಮಿಗಳನ್ನು ರಂಜಿಸಿದರು.




