May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ವರ್ಗಾವಣೆ – ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ

ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮವು ಭೌಗೋಳಿಕವಾಗಿ ಪುತ್ತೂರು ಹೋಬಳಿಗೆ ಹತ್ತಿರವಿದ್ದರೂ, ಆಡಳಿತಾತ್ಮಕವಾಗಿ ಉಪ್ಪಿನಂಗಡಿ ಹೋಬಳಿಗೆ ಸೇರಿತ್ತು. ಇದರ ಪರಿಣಾಮವಾಗಿ ಗ್ರಾಮಸ್ಥರಿಗೆ ಕಂದಾಯ ಇಲಾಖೆಯ ಕೆಲಸಕಾರ್ಯಗಳಿಗಾಗಿ ದೂರದ ಉಪ್ಪಿನಂಗಡಿಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿತ್ತು. ಈ ಸಮಸ್ಯೆಯಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರು.

ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ:

ಗ್ರಾಮಸ್ಥರ ಈ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಷಯವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡರವರ ಗಮನಕ್ಕೆ ತಂದು, ಕೊಡಿಪ್ಪಾಡಿ ಗ್ರಾಮವನ್ನು ಪುತ್ತೂರು ಹೋಬಳಿಗೆ ಸೇರಿಸುವಂತೆ ವಿನಂತಿಸಿದ್ದರು. ಕಂದಾಯ ಸಚಿವರು ತಕ್ಷಣ ಸ್ಪಂದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ, ಇದರಿಂದ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಲಿದೆ. ಗ್ರಾಮವನ್ನು ಪುತ್ತೂರು ಹೋಬಳಿಗೆ ಸೇರಿಸುವುದರಿಂದ ಕೊಡಿಪ್ಪಾಡಿ ಗ್ರಾಮಸ್ಥರಿಗೆ ಸರ್ಕಾರಿ ಕಚೇರಿಗಳಿಗೆ ತೆರಳುವ ಅಂತರ ಕಡಿಮೆಯಾಗುತ್ತದೆ ಮತ್ತು ಆಡಳಿತಾತ್ಮಕ ಕಾರ್ಯಗಳು ಸುಗಮಗೊಳ್ಳಲಿವೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page