August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

EPFO ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ

CEO ಸೇರಿ ಇಬ್ಬರು ಆರೋಪಿಗಳ ಬಂಧನ

ಸುಮಾರು 300 ಖಾತೆದಾರರ 70 ಕೋಟಿ ರೂಪಾಯಿ ಹಣವನ್ನು ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ಯಾಮಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. EPFO ಸಿಬ್ಬಂದಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ 70 ಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ CEO ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯ CEO ಗೋಪಿನಾಥ್‌ ಹಾಗೂ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಬಂಧಿತ ಆರೋಪಿಗಳು.

ಪ್ರಸ್ತುತ ಮತ್ತು ನಿವೃತ್ತ EPFO ಸಿಬ್ಬಂದಿಗಳು ತಮ್ಮ ಉಳಿತಾಯವನ್ನು ಈ ಸೊಸೈಟಿಯಲ್ಲಿ FD ಮಾಡಿದ್ದರು. ಈ ಠೇವಣಿಗಳಿಗೆ ಪ್ರತಿ ತಿಂಗಳು ಬಡ್ಡಿ ಹಣ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿಂದ ಹೂಡಿಕೆದಾರರಿಗೆ ಬಡ್ಡಿ ಹಣ ಖಾತೆಗೆ ಜಮೆಯಾಗದ ಕಾರಣ ಅನುಮಾನಗೊಂಡು ಹೂಡಿಕೆದಾರರು ಸ್ವತಃ ಪರಿಶೀಲಿಸಿದಾಗ ಸೊಸೈಟಿಯಲ್ಲಿ ಇರಿಸಿದ್ದ FD ಹಣ ನಾಪತ್ತೆಯಾಗಿರುವುದು ಬಯಲಾಗಿದೆ. ಕೇವಲ ಮೂರು ಕೋಟಿ ರೂಪಾಯಿಗಳನ್ನು ಮಾತ್ರ ಸಾಲವಾಗಿ ನೀಡಲಾಗಿದ್ದು, ಉಳಿದ 70 ಕೋಟಿ ರೂಪಾಯಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 300ಕ್ಕೂ ಹೆಚ್ಚು ಠೇವಣಿದಾರರು ಈ ವಂಚನೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.


ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page