October 22, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು FTSC-II ನ್ಯಾಯಾಲಯದಿಂದ ಪೋಕ್ಸೊ ಪ್ರಕರಣದ ಆರೋಪಿ ಅಮೀರ್‌ಗೆ ಜಾಮೀನು ಮಂಜೂರು

ಪ್ರಖ್ಯಾತ ಹಿರಿಯ ನ್ಯಾಯವಾದಿ SS KHAZI ಯವರು ಮಂಡಿಸಿದ ವಾದ

 

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿದ್ದ ಅಮೀರ್ ಗೆ ಇಂದು ನವಂಬರ್ 07ರಂದು ಮಂಗಳೂರು FTSC-II ಘನ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣವು ಅಪರಾಧ ವಿವಾದ ಸಂ. 1024/2025 (Crl. Misc. No. 1024/2025) ಆಗಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಮಂಗಳೂರು FTSC-II ಅವರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.

ಆರೋಪಿಯ ಪರವಾಗಿ ಹಿರಿಯ ವಕೀಲರಾದ ಎಸ್. ಎಸ್. ಖಾಜಿ ವಾದ ಮಂಡಿಸಿದರು. ವಿಚಾರಣೆ ಆಲಿಸಿದ ನಂತರ ನ್ಯಾಯಾಲಯವು ಭಾರತೀಯ ಹೊಸ ಅಪರಾಧ ಸಂಹಿತೆ (BNSS) ವಿಧಿ 483(1) ಅಡಿಯಲ್ಲಿ ಸಲ್ಲಿಸಲಾದ ಜಾಮೀನು ಅರ್ಜಿಯನ್ನು ಷರತ್ತುಪೂರಕವಾಗಿ ಅನುಮೋದಿಸಿತು.

ಉಳ್ಳಾಲದ ಕುಂಪಲ ಬೈಪಾಸ್ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ನಡೆದಿದ್ದು, ಆಕೆಯ ತಾಯಿಯ ಎರಡನೇ ಪತಿ ಆಗಿರುವ ಅಮೀರ್ ವಿರುದ್ಧ ಪೋಕ್ಸೊ (POCSO) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಇಂದು ನ್ಯಾಯಾಲಯದ ತೀರ್ಪಿನಿಂದ ಆರೋಪಿ ಅಮೀರ್ ಗೆ ಷರತ್ತುಗಳೊಂದಿಗೆ ಜಾಮೀನು ದೊರೆತಿದೆ.

You may also like

News

ಮೂಡುಬಿದಿರೆಯಲ್ಲಿ ವಿದ್ಯುತ್ ಅವಘಡ: ಮಗ ಶೋನ್‌ನ ರಕ್ಷಣೆಗೆ ಧಾವಿಸಿದ ತಾಯಿ ಮರ್ಸಿ ಮಸ್ಕರೇನಸ್‌ಗೂ ವಿದ್ಯುತ್ ಶಾಕ್‌ – ಇಬ್ಬರೂ ದುರ್ಮರಣ!

ಮಗನನ್ನು ರಕ್ಷಿಸಲು ಧಾವಿಸಿದ ತಾಯಿಯೂ ವಿದ್ಯುತ್ ಪ್ರವಹಿಸಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಮೂಡುಬಿದಿರೆಯ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ 45 ವರ್ಷ ಪ್ರಾಯದ
News

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ವೈಭವ ಸಂಪನ್ನ – ಒಂಬತ್ತು ದಿನಗಳ ವಿಶೇಷ ಪೂಜೆ, ಧಾರ್ಮಿಕ ಉತ್ಸವ ಹಾಗೂ ಸಂಗೀತಾರಾಧನೆಗೆ ತೆರೆ

ಸಹಸ್ರಾರು ಮುತ್ತೈದೆಯರಿಗೆ ವಸ್ತ್ರ ಪ್ರಸಾದ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಒಂಬತ್ತು ದಿನಗಳ ಕಾಲ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ನಡೆದ ಶರನ್ನವರಾತ್ರಿ ಮಹೋತ್ಸವವು ಅಕ್ಟೋಬರ್ 19ರಂದು ಮಹಾನವಮಿಯಂದು

You cannot copy content of this page