August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್.  ಆಯ್ಕೆಯಾಗಿರುತ್ತಾನೆ.

ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ. ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ ಕಬಡ್ಡಿ ವಿಭಾಗದ ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ದಕ್ಷಿಣ ಕನ್ನಡ ತಂಡದ ನಾಯಕನಾಗಿ ಭಾಗವಹಿಸಿರುತ್ತಾನೆ.

ಇವನು ಬಂಟ್ವಾಳ ತಾಲೂಕಿನ ನಾರ್ಶ ಮೈದಾನ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸುರಿಬೈಲು ಪ್ರೌಢಶಾಲಾ ಶಿಕ್ಷಕಿ ಸ್ವಪ್ನ ಇವರ ಪುತ್ರನಾಗಿರುತ್ತಾನೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page