April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೆಕ್ಕಿಲಾಡಿಯ ಅನಿ ಮಿನೇಜಸ್ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ  34 ನೆಕ್ಕಿಲಾಡಿಯ ಅನಿ ಮಿನೇಜಸ್ ರವರನ್ನು ನೇಮಕಗೊಳಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆದೇಶಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಅನಿ ಮಿನೇಜಸ್ ರವರು ಒಂದು ಅವಧಿಗೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, ಈ ಸಂದರ್ಭ ತನಗೆ ಬರುವ ತಿಂಗಳ ಗೌರವ ಧನವನ್ನು ಬಡ ಕುಟುಂಬಗಳಿಗೆ ನೀಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದರು. ನಮ್ಮೂರು ನೆಕ್ಕಿಲಾಡಿ ಸಂಘಟನೆಯ ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

34 ನೆಕ್ಕಿಲಾಡಿ ಗ್ರಾಮದ ಬೀತಲಪ್ಪುವಿನಲ್ಲಿ ಸುಶೀಲಾರವರ ಮನೆ ಕುಸಿದು ಬಿದ್ದ ಸಂದರ್ಭ ಸಮಾನ ಮನಸ್ಕ ದಾನಿಗಳ ನೆರವು ಪಡೆದು ಸುಮಾರು ಒಂದು ಲಕ್ಷದ ಮೂವತ್ತು ಸಾವಿರ ರೂಪಾಯಿ ವೆಚ್ಚದಲ್ಲಿ ಅವರ ಮನೆಯನ್ನು ಪುನರ್ ನಿರ್ಮಿಸುವಲ್ಲಿ ಪುಮುಖ ಪಾತ್ರ ವಹಿಸಿದ್ದ ಇವರು, ಬೀತಲಪ್ಪುವಿನ ಉಷಾರವರ ಮನೆಯ ಮೇಲ್ಮಾವಣಿಯನ್ನು ಸುಮಾರು 80 ಸಾವಿರ ರೂಪಾಯಿ ವೆಚ್ಚದಲ್ಲಿ ದಾನಿಗಳ ನೆರವಿನಲ್ಲಿ ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ಇವರು 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದು, ಪಕ್ಷ ಸಂಘಟಿಸುವಲ್ಲಿ ಮತ್ತು ಗ್ರಾಮದ ಅಭಿವೃದ್ಧಿಗೆ ಸರಕಾರದಿಂದ ಅನುದಾನ ತರಿಸುವಲ್ಲಿ ಪುಮುಖ ಪಾತ್ರ ವಹಿಸಿದ್ದಾರಲ್ಲದೆ, ನೆಕ್ಕಿಲಾಡಿ ಗ್ರಾಮದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.


ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾರವರ ನೇತೃತ್ವದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ದುಡಿಯಲು ಸೌಮ್ಯ ರೆಡ್ಡಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಗ್ರಾಮಾಂತರ ಇದರ ಅಧ್ಯಕ್ಷೆ ಉಷಾ ಅಂಚನ್ ರವರು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅನಿ ಮಿನೇಜಸ್ ರವರನ್ನು ನೇಮಕಗೊಳಿಸಿದ್ದಾರೆ.

You may also like

News

ಧರ್ಮಸ್ಥಳದಲ್ಲಿ 54ನೇ ವರ್ಷದ ಸಾಮೂಹಿಕ ವಿವಾಹ – 106 ಜೋಡಿಗಳ ದಾಂಪತ್ಯ ಆರಂಭ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 29ರಂದು ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
News

Saint Theresa’s School Mangaluru Records 22nd Consecutive Year of 100% Success in ICSE Class X Exams 2025–26

Principal Sr Lourdes  and faculty congratulate students on their success MANGALURU: In a resounding celebration of intellectual brilliance and disciplined

You cannot copy content of this page