May 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸತೀಶ್ ಬಂಗೇರ ಕಾಶಿಪಟ್ಣರವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ

ಸಹಕಾರಿ‌ ಕ್ಷೇತ್ರದಲ್ಲಿ ಕಳೆದ 25ವರ್ಷಗಳಿಂದ ಸಲ್ಲಿಸಿರುವ ಅಮೂಲ್ಯ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಬಂಗೇರ ಕಾಶಿಪಟ್ಣರವರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಸತೀಶ್ ಬಂಗೇರ ಕಾಶಿಪಟ್ಣರವರು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಬೆಳ್ತಂಗಡಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣ‌ ಸಹಕಾರ ಸಂಘದ ಅಧ್ಯಕ್ಷರೂ ಆಗಿದ್ದು ಸಂಘವನ್ನು ಮುನ್ನಡೆಸುತ್ತಿದ್ದಾರೆ.

ನವೆಂಬರ್ 14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಿದ್ದಾರೆ.

You may also like

News

ಸಾಹಿತ್ಯ ಸಂಭ್ರಮ – ಮೇ 10ರಂದು ವಲ್ಲಿ ವಗ್ಗ ಅವರ ‘ವಿಂಚ್ಣಾರ್ ಕಾಣಿಯೊ’ ಕೃತಿ ಲೋಕಾರ್ಪಣೆ

ಕೊಂಕಣಿ ಸಾಹಿತ್ಯ ಲೋಕದ ಹಿರಿಯ ಸಾಹಿತಿ ವಲ್ಲಿ ವಗ್ಗ (ವಲೇರಿಯನ್ ಡಿಸೋಜ) ಅವರ ಬಹುನಿರೀಕ್ಷಿತ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆಗೆ ಸಜ್ಜಾಗಿದೆ. ಈ ಪುಸ್ತಕ ಲೋಕಾರ್ಪಣೆ
News

ಮುಕ್ಕ ಚೇಳ್ಯಾರು ಸಂತ ಜೋಸೆಫ್ ಪ್ರಾರ್ಥನಾ ಮಂದಿರದ ದಶಮಾನೋತ್ಸವ ಹಾಗೂ ವಾರ್ಷಿಕೋತ್ಸವ ಸಂಭ್ರಮ

“ಪ್ರಾರ್ಥನಾ ಮಂದಿರಗಳು ಮನುಷ್ಯರಲ್ಲಿ ಪ್ರೀತಿಯನ್ನು ಬಿತ್ತಬೇಕು” – ಡಾ| ಗಣೇಶ್ ಅಮಿನ್ ಸಂಕಮಾರ್ ಕಥೋಲಿಕ ತೈಲಾಗಾರ ನಿರ್ವಸಿತರ ಅಭಿವೃದ್ಧಿ ಸಮಿತಿ (ರಿ.) ಮುಕ್ಕ ಚೇಳ್ಯಾರು ಇದರ ಆಶ್ರಯದಲ್ಲಿ,

You cannot copy content of this page