May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನಲ್ಲಿ ಪೈಪ್‌ಲೈನ್ ಹಾನಿಯಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ – ದುರಸ್ತಿ ಪೂರ್ಣ

ನಾಳೆ ನವೆಂಬರ್ 20ರಂದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ

ಮಂಗಳೂರಿನ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆ ನವೆಂಬರ್ 17ರಂದು ಸೋಮವಾರ ಬೆಳಗ್ಗೆ ಪಡೀಲ್ ಸಮೀಪದ ಕಣ್ಣೂರು ಬಳಿ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು, ಕೆಲಸವನ್ನು ಇಂದು ನವೆಂಬರ್ 19ರಂದು ಬುಧವಾರ ಪೂರ್ಣಗೊಳಿಸಲಾಗಿದೆ.

ಪಾಲಿಕೆಯ ಪ್ರಕಾರ, ದುರಸ್ತಿ ಕಾರ್ಯ ಪೂರ್ಣಗೊಂಡಿರುವುದರಿಂದ ನಾಳೆ ನವೆಂಬರ್ 20ರಂದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ.

ಈ ಸಂದರ್ಭ ಸಾರ್ವಜನಿಕರು ಸಹಕಾರ ನೀಡುವಂತೆ  ಮಹಾನಗರ ಪಾಲಿಕೆ ವಿನಂತಿಸಿದೆ.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page