May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಸಂಸದರ ನಡೆ ಗ್ರಾಮದ ಕಡೆʼ – ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾಪ್ಟನ್ ಚೌಟ

‘ಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರು ನವೆಂಬರ್ 20ರಂದು ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾಪ್ಟನ್ ಚೌಟರವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಕ್ರಿಯಿಸಿರುವ ಸಂಸದರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಭಾಗದ ಜನರನ್ನು ತಲುಪುವುದು; ಆ ಮೂಲಕ ಅವರ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕೆಂಬ ಆಶಯ ನನ್ನದು. ಜನರ ಸಮಸ್ಯೆಗಳು-ಸವಾಲುಗಳಿಗೆ ಖುದ್ದು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ‌ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್ ದಂಬೇಕೋಡಿ, ಕಿಶೋರ್ ಶಿರಾಡಿ, ವಿನಯ್ ಮುಳುಗಾಡು, ವಿನಯ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೇಶವ ಭಟ್ ಮುಳಿಯ, ಶ್ರೀಕಾಂತ್ ಮಾವಿನಕಟ್ಟೆ, ಸೋಮಶೇಖರ್ ಕಟ್ಟೆಮನೆ, ಚಂದ್ರಹಾಸ ಶಿವಾಲ, ಎಟಿ ಕುಸುಮಾಧರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page