August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರ್ಕಳ ಕ್ರೈಸ್ಟ್ ಕಿಂಗ್ ವಿದ್ಯಾರ್ಥಿನಿ ಏಂಜೆಲ್ ನಿಧನ

ಕಾರ್ಕಳದ ಕ್ರೈಸ್ಟ್ ಕಿಂಗ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಹೆಬ್ರಿ ತಾಲೂಕು ಮುದ್ರಾಡಿಯ 17ವರ್ಷ ಪ್ರಾಯದ ಏಂಜೆಲ್ ಆಲ್ಪನಾ ಜೇಮ್ಸ್ ಇಂದು ನವೆಂಬರ್ 27ರಂದು ಗುರುವಾರ ಮೃತಪಟ್ಟಿದ್ದಾಳೆ.

ನವೆಂಬರ್ 26ರಂದು ಬುಧವಾರ ಸ್ಥಳೀಯ ಕ್ರೈಸ್ಟ್ ಕಿಂಗ್ ಚರ್ಚ್‌ನ ವಾರ್ಷಿಕ ಹಬ್ಬವಿದ್ದ ಕಾರಣ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಗೆ ರಜೆ ಸಾರಲಾಗಿತ್ತು. ಹೀಗಾಗಿ ಏಂಜೆಲ್ ಮನೆಯಲ್ಲೇ ಇದ್ದಳು. ಏಕಾಏಕಿ ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದ ಕಾರಣ ಹೆತ್ತವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಆಕೆಗೆ ಇಂಜೆಕ್ಷನ್ ನೀಡಿದ್ದರು. ಮನೆಗೆ ಬಂದ ಬಳಿಕ ಏಂಜೆಲ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮತ್ತೆ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೊಂಡೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾಳೆ. ವಿಷಯುಕ್ತ ಆಹಾರ ಸೇವೆನೆಯಿಂದಾಗಿ ಮೃತಪಟ್ಟಿದ್ದಾಳೆ ಎನ್ನಲಾಗುತ್ತಿದೆ. ಏಂಜೆಲ್ ಜಾಕೋಬ್ ಮತ್ತು ಮೇರಿ ಬೀನಾ ದಂಪತಿಯ ಏಕೈಕ ಪುತ್ರಿಯಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page