August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಬಡ್ಡಿ ವಿಶ್ವಕಪ್ ಚಾಂಪಿಯನ್ ಕುಮಾರಿ ಧನಲಕ್ಷ್ಮೀ ಪೂಜಾರಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ ಮತ್ತು ಸನ್ಮಾನ

ನಮ್ಮೂರಿನ ಹೆಮ್ಮೆಯ ಪ್ರತಿಭೆಗೆ ಅಭಿಮಾನದ ನಮನ

ಕಬಡ್ಡಿ ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುವ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು ಹಾಗೂ ನಾರಾಯಣ ಪೂಜಾರಿ–ಶಶಿಕಲಾ ದಂಪತಿಯ ಮಗಳಾದ ಕುಮಾರಿ ಧನಲಕ್ಷ್ಮೀ ಪೂಜಾರಿ ಅವರನ್ನು ಇಂದು ನವೆಂಬರ್ 29ರಂದು ಶನಿವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.

ಬಿಜೆಪಿ ಮಂಗಳೂರು ಉತ್ತರ ಹಾಗೂ ದಕ್ಷಿಣ ಮಂಡಲಗಳ ವತಿಯಿಂದ ನಡೆದ ಈ ಸಂಭ್ರಮ ಸ್ವಾಗತ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, ದಕ್ಷಿಣ ಕನ್ನಡ ಕಬಡ್ಡಿ ಒಕ್ಕೂಟದ ಪದಾಧಿಕಾರಿಗಳು, ಆಳ್ವಾಸ್ ವಿದ್ಯಾ ಸಂಸ್ಥೆಯ ವಿವೇಕ್ ಆಳ್ವ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ಕುಮಾರಿ ಧನಲಕ್ಷ್ಮೀ ಪೂಜಾರಿಯವರ ಸಾಧನೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿ, ಅವರ ಮುಂದಿನ ಕ್ರೀಡಾ ಜೀವನವು ಉಜ್ವಲವಾಗಿರಲೆಂದು ಶುಭ ಹಾರೈಸಿದರು.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page