April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಮೋ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ

ಫಿಟ್‌, ಯಂಗ್‌, ಆತ್ಮನಿರ್ಭರ ಭಾರತದಿಂದ ಮಾತ್ರ ವಿಕಸಿತ ಭಾರತ ನಿರ್ಮಾಣ – ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್‌ ಕ್ರೀಡೋತ್ಸವದ ಭಾಗವಾಗಿ ನಿನ್ನೆ ನವೆಂಬರ್ 29ರಂದು ಶನಿವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಯ ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಿದೆ. ಅಂಥಹ ಆರೋಗ್ಯವಂಥ ಭಾರತ ನಿರ್ಮಾಣದ ಪ್ರಯತ್ನವೇ ಈ ಸಂಸತ್‌ ಕ್ರೀಡೋತ್ಸವದ ಪ್ರಯುಕ್ತ ಆಯೋಜಿಸಿರುವ ಈ ನಮೋ ಕ್ರೀಡಾ ಸ್ಪರ್ಧೆಗಳು. ಕಳೆದ ವಾರ ನಮೋ ಚೆಸ್‌ ಟೂರ್ನಿ ಆಯೋಜಿಸಲಾಗಿದ್ದು, ಇದೀಗ ನಮೋ ಬ್ಯಾಡ್ಮಿಂಟನ್‌ ಪಂದ್ಯಾಟಕ್ಕೆ ಚಾಲನೆ ನೀಡಲಾಗಿದೆ” ಎಂದು ಹೇಳಿದರು. ಇಂದು ನವೆಂಬರ್ 30ರಂದು ಭಾನುವಾರ ನಮೋ ವಾಲಿಬಾಲ್‌ ಟೂರ್ನಿ ಪ್ರಾರಂಭವಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಭಾರತ ದೇಶವು ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯ ಹೆಜ್ಜೆ ಹಾಕುತ್ತಿದೆ. ಇಂಥಹ ಕಾಲಘಟ್ಟದಲ್ಲಿ ಕೇವಲ ಫಿಟ್‌ ಇಂಡಿಯಾ ಭಾರತ ಮಾತ್ರ ವಿಕಸಿತ ಭಾರತವಾಗಿ ರೂಪುಗೊಳ್ಳುವುದಕ್ಕೆ ಸಾಧ್ಯ. ಅಲ್ಲದೇ ಕೇವಲ ಒಂದು ಯಂಗ್‌ ಇಂಡಿಯಾ ಮಾತ್ರ ವಿಕಸಿತ ಭಾರತವಾಗಲಿದೆ. ಹಾಗೆಯೇ ಒಂದು ಆತ್ಮನಿರ್ಭರ ಭಾರತ ಮಾತ್ರ ವಿಕಸಿತ ಭಾರತವಾಗಿ ನಿರ್ಮಾಣವಾಗುವುದಕ್ಕೆ ಸಾಧ್ಯ. ಹೀಗಿರುವಾಗ, ನಾವೆಲ್ಲ ಪ್ರಧಾನಿಯವರ ಕನಸಿತ ಆ ವಿಕಸಿತ ಭಾರತದ ಕನಸಿನತ್ತ ಹೆಜ್ಜೆ ಹಾಕುವುದಕ್ಕೆ ಕಾರ್ಯೋನ್ಮುಖರಾಗಬೇಕೆಂದು ಕ್ಯಾಪ್ಟನ್ ಚೌಟ ಕರೆ ನೀಡಿದ್ದಾರೆ.

 

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ಸಂಸತ್‌ ಕ್ರೀಡೋತ್ಸವು ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಉತ್ತೇಜನವನ್ನು ನೀಡುತ್ತಿದೆ. ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಬಹಳ ಯಶಸ್ವಿಯಾಗಿ ಈ ಸಂಸತ್‌ ಕ್ರೀಡಾ ಮಹೋತ್ಸವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ನಾನು ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಉದ್ಘಾಟನೆ ಬಳಿಕ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್‌ ಅವರು ಬ್ಯಾಡ್ಮಿಂಟನ್‌ ಆಟವಾಡಿ ಗಮನಸೆಳೆದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page