May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆನ್ ಲೈನ್ ವಂಚನೆಗೆ ಕಡಿವಾಣ

ಎಲ್ಲಾ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಕ್ಕೆ ಕೇಂದ್ರ ಆದೇಶ

ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪೆನಿಗಳಿಗೆ ಆದೇಶ ನೀಡಿದೆ.

ಈ ಆದೇಶದ ಪುಕಾರ, ಸ್ಮಾರ್ಟ್‌ಫೋನ್ ತಯಾರಕರು 90 ದಿನಗಳಲ್ಲಿ ಎಲ್ಲಾ ಹೊಸ ಮಾದರಿಗಳಲ್ಲಿ ಈ ಅಪ್ಲಿಕೇಶನ್ ಅನ್ನು ಫ್ರಿ ಇನ್‌ಸ್ಟಾಲ್‌ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಬಳಕೆದಾರರು ಈ ಅಪ್ಲಿಕೇಶನ್ ನನ್ನು ತಮ್ಮ ಫೋನ್‌ಗಳಿಂದ ಅನ್‌ಇನ್‌ಸ್ಟಾಲ್‌ ಮಾಡಲು ಅಥವಾ ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್ ನೀಡುವಾಗ ಈ ಆಪ್ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚಿಸಿದೆ. ಈ ನಿಯಮವು ಆ್ಯಪಲ್, ಸ್ಯಾಮ್‌ಸಂಗ್, ಗೂಗಲ್, ಶಿಯೋಮಿ, ವಿವೋ ಅಥವಾ ಯಾವುದೇ ಇತರ ಬ್ಯಾಂಡ್ ಆಗಿರಲಿ ಎಲ್ಲಾ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರಯೋಜನಗಳೇನು?

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಮತ್ತು ಕದ್ದ ಮೊಬೈಲ್‌ಗಳನ್ನು ಬಳಸಿಕೊಂಡು ನಡೆಸುವ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ‘ಸಂಚಾರ್‌ ಸಾಥಿ’ ಆ್ಯಪ್ ಮೂಲಕ ಇದಕ್ಕೆ ಕಡಿವಾಣ ಹಾಕಲು ಸಿದ್ಧತೆ ನಡೆಸಿದೆ. ಈ ಆ್ಯಪ್, ಕಳೆದುಹೋದ ಅಥವಾ ಕದ್ದೊಯ್ದ ಫೋನ್‌ಗಳನ್ನು ಬ್ಲಾಕ್ ಮಾಡಲು ಮತ್ತು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ, ಬಳಕೆದಾರರ ಹೆಸರಿನಲ್ಲಿರುವ ನಕಲಿ ಮೊಬೈಲ್ ಸಂಪರ್ಕಗಳನ್ನು ಗುರುತಿಸಿ, ಅವುಗಳನ್ನು ಕಡಿತಗೊಳಿಸಲು ಕೂಡ ಅವಕಾಶ ನೀಡುತ್ತದೆ.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page