August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗೌರವ: ಬೆಳಗಾವಿ ಅಧಿವೇಶನ ಮುಂದೂಡಿ ದಾವಣಗೆರೆಗೆ ತೆರಳಿ ಅಂತಿಮ ದರ್ಶನ ಪಡೆದ ಸಭಾಧ್ಯಕ್ಷ ಯು.ಟಿ. ಖಾದರ್

ನಿನ್ನೆ ಡಿಸೆಂಬರ್ 14ರಂದು ಭಾನುವಾರ ಸಂಜೆ ನಿಧನ ಹೊಂದಿದ ಉದ್ಯಮಿ, ಹಿರಿಯ ರಾಜಕಾರಣಿ ಹಾಗೂ ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ಶಾಸಕರಾಗಿದ್ದ ಸರಳ ಸಜ್ಜನಿಕೆಯ ನಾಯಕ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಗೌರವ ಸಲ್ಲಿಸುವ ಸಲುವಾಗಿ, ಇಂದು ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ವಿಧಾನಸಭಾ ಅಧಿವೇಶನವನ್ನು ಮುಂದೂಡಲಾಯಿತು.

ಅಧಿವೇಶನ ಮುಂದೂಡಿದ ನಂತರ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ದಾವಣಗೆರೆಗೆ ತೆರಳಿ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕಾರಣದಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ, ಅವರ ನಿಧನ ರಾಜ್ಯಕ್ಕೆ ಅಪಾರ ನಷ್ಟವಾಗಿದೆ ಎಂದು ಸಭಾಧ್ಯಕ್ಷರು ಸಂತಾಪ ವ್ಯಕ್ತಪಡಿಸಿದರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page