August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಂಚನೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸುಳ್ಯ ಪೊಲೀಸರಿಂದ ಬಂಧನ

ಸುಳ್ಯ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 47/2022 (ಕಲಂ 406 ಹಾಗೂ 420 ಐಪಿಸಿ) ಅಡಿಯಲ್ಲಿ ದಾಖಲಾದ ವಂಚನೆ ಪ್ರಕರಣದಲ್ಲಿ, ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬ ಆರೋಪಿಯನ್ನು, ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ 359 ರಮೇಶ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ 2298 ಶ್ರೀಶೈಲ ಅವರುಗಳು ದಿನಾಂಕ 18.12.2025 ರಂದು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಪ್ರದೇಶದಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page