August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಟ್ರಾಫಿಕ್ ದಂಡ ಪಾವತಿ ಹೆಸರಿನಲ್ಲಿ APK ಆ್ಯಪ್ ವಂಚನೆ: ನಾಗರಿಕರಿಗೆ ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

ಟ್ರಾಫಿಕ್ ದಂಡ ಪಾವತಿ ಕುರಿತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಹೊಸ ರೀತಿಯ ಮೋಸಕ್ಕೆ ಇಳಿದಿದ್ದಾರೆ. ಟ್ರಾಫಿಕ್ ದಂಡ ಪಾವತಿಸಲು ಎಂಬ ನೆಪದಲ್ಲಿ ಅಪರಿಚಿತ ಲಿಂಕ್‌ಗಳನ್ನು ಕಳುಹಿಸಿ, APK ಫೈಲ್‌ಗಳನ್ನು ಡೌನ್‌ಲೋಡ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಿದರೆ ಮೊಬೈಲ್ ಹ್ಯಾಕ್ ಆಗಿ, ಬ್ಯಾಂಕ್ ವಿವರಗಳು ಹಾಗೂ ಒಟಿಪಿ ಮಾಹಿತಿಗಳು ವಂಚಕರ ಕೈ ಸೇರುತ್ತಿದ್ದು, ಖಾತೆಯಲ್ಲಿರುವ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತರು ಈ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದು, ಟ್ರಾಫಿಕ್ ದಂಡವನ್ನು ಕೇವಲ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿಯೇ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಟ್ರಾಫಿಕ್ ದಂಡ ಪಾವತಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮೊಬೈಲ್ ಆ್ಯಪ್ ಲಭ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅದೇ ರೀತಿ, ಯಾವುದೇ ಸಂದರ್ಭದಲ್ಲೂ ನೇರವಾಗಿ ಕಳುಹಿಸಲಾದ APK ಫೈಲ್‌ಗಳನ್ನು ಡೌನ್‌ಲೋಡ್ ಮಾಡಬಾರದು. ಆ್ಯಪ್ ಅಗತ್ಯವಿದ್ದರೆ, ಅದು ಕೇವಲ ಪ್ಲೇಸ್ಟೋರ್ ಅಥವಾ ಆ್ಯಪ್ ಸ್ಟೋರ್‌ನಲ್ಲಿರುವ ಪರಿಶೀಲಿತ (Verified) ಆ್ಯಪ್‌ಗಳಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

ಈ ರೀತಿಯ ವಂಚನೆಗೆ ನಿನ್ನೆ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಹಾಗೂ ಇಂತಹ ಸಂದೇಶಗಳು ಅಥವಾ ಲಿಂಕ್‌ಗಳು ಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ನಗರ ಪೊಲೀಸ್ ಇಲಾಖೆ ಈ ಕುರಿತು ಸಾರ್ವಜನಿಕ ಜಾಗೃತಿ ಮೂಡಿಸುವಂತೆ ನಾಗರಿಕರಲ್ಲಿ ಸಹಕಾರ ಕೋರಿದೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page