May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಡಬ ಬಾರ್‌ನಲ್ಲಿ ನಗದು ಹಾಗೂ ಮದ್ಯ ಕಳವು – ನೌಕರನ ವಿರುದ್ಧ ಪ್ರಕರಣ ದಾಖಲು

ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿರುವ ಬಾರ್‌ನಲ್ಲಿ ನಗದು ಹಾಗೂ ಮದ್ಯವನ್ನು ಕಳವು ಮಾಡಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ 25 ವರ್ಷ ಪ್ರಾಯದ ವಿಶಾಲ್ ಸ್ಟೀಫನ್ ಅವರು ನೀಡಿದ ದೂರಿನಂತೆ, ಅವರ ತಾಯಿಗೆ ಸೇರಿದ ಬಾರ್‌ನಲ್ಲಿ ಕಡಬ ತಾಲೂಕಿನ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ.ಕೆ. ಎಂಬಾತನು ಕಳೆದ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ದಿನನಿತ್ಯದ ಹಣಕಾಸು ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದನು.

ಡಿಸೆಂಬರ್ 21ರಂದು ಭಾನುವಾರ ರಾತ್ರಿ ಬಾರ್‌ನ ವಹಿವಾಟು ಪರಿಶೀಲನೆ ನಡೆಸಿದ ವೇಳೆ ಲೆಕ್ಕಪತ್ರಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ಮರುದಿನ ಎಲ್ಲವೂ ಸರಿಯಾಗುತ್ತದೆ ಹಾಗೂ ವ್ಯಾಪಾರದ ನಗದನ್ನು ಬ್ಯಾಂಕಿಗೆ ಜಮೆ ಮಾಡುವುದಾಗಿ ಹರ್ಷಿತ್ ತಿಳಿಸಿದ್ದಾನೆ. ಆದರೆ ಮರುದಿನ ಹಣ ಜಮೆಯಾಗದ ಹಿನ್ನೆಲೆಯಲ್ಲಿ ಆತನ ವಾಸ್ತವ್ಯವಿದ್ದ ಕೊಠಡಿಗೆ ತೆರಳಿದಾಗ ಆತ ನಾಪತ್ತೆಯಾಗಿರುವುದು ಕಂಡುಬಂದಿದೆ.

ಪರಿಶೀಲನೆ ವೇಳೆ ಸ್ಟಾಕ್ ರೂಮಿನಲ್ಲಿದ್ದ ಸುಮಾರು  ರೂಪಾಯಿ 6,57,104 ಮೌಲ್ಯದ ಮದ್ಯವನ್ನು ಆರೋಪಿಯು ಈ ಮೊದಲೇ ಮಾರಾಟ ಮಾಡಿ, ಅದರ ಮೊತ್ತವನ್ನು ಬ್ಯಾಂಕಿಗೆ ಜಮೆ ಮಾಡದೇ ವಂಚಿಸಿರುವುದು ಹಾಗೂ ಡಿಸೆಂಬರ್ 21ರಂದು ವ್ಯಾಪಾರದ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 94/2025, ಕಲಂ 303(2), 314, 316(4) BNS–2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page