August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿದ ಸಿದ್ದರಾಮಯ್ಯರಿಗೆ ಯು.ಟಿ. ಖಾದರ್ ಅಭಿನಂದನೆ

ರಾಜ್ಯದ ರಾಜಕೀಯದಲ್ಲಿ ಹೊಸ ಕಾಲಘಟ್ಟವೊಂದನ್ನು ನಿರ್ಮಿಸಿ ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಅವರು ತುಂಬು ಹೃದಯದ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ದೇವರಾಜ್ ಅರಸ್ ಅವರು ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮ್ಮ ತಂದೆ ಯು.ಟಿ. ಫರೀದ್ ಅವರು ಅವರ ಜೊತೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಅದೇ ರೀತಿಯಾಗಿ ಇಂದು ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂದರ್ಭದಲ್ಲಿ ತಾವೂ ಅವರ ಜೊತೆ ಉನ್ನತ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಷಯವೆಂದು ಯು.ಟಿ. ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ರಾಜಕೀಯದಲ್ಲಿ ‘ಸಿದ್ದರಾಮಯ್ಯನವರ ಕಾಲ’ ಎಂದು ಜನ ಗರ್ವದಿಂದ ಹೇಳಿಕೊಳ್ಳುವಂತಹ ಅವಧಿಯನ್ನು ಅವರು ರೂಪಿಸಿದ್ದಾರೆ. ಒಡೆಯುವ ರಾಜಕಾರಣದ ನಡುವೆ ಒಂದಾಗಿಸುವ ನಾಯಕತ್ವವನ್ನು ನೀಡಿದ ಸಿದ್ದರಾಮಯ್ಯ ಅವರು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದತೆಯ ಧ್ವಜವನ್ನು ಎತ್ತಿ ಹಿಡಿದಿದ್ದಾರೆ ಎಂದು ಖಾದರ್ ಶ್ಲಾಘಿಸಿದ್ದಾರೆ.

ಶೋಷಿತರು, ಪೀಡಿತರು ಹಾಗೂ ದಮನಿತರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎತ್ತಿರುವ ದನಿಗೆ ತಾವು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ ಅವರು, ಈ ಸುಸಂದರ್ಭದಲ್ಲಿ ಸಮಾನತೆಯ ಸಮಾಜ ನಿರ್ಮಾಣದ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸೋಣ ಎಂದು ಕರೆ ನೀಡಿದ್ದಾರೆ. ಅಂತಿಮವಾಗಿ “ಮಗದೊಮ್ಮೆ ಶುಭಾಶಯಗಳು ಮುಖ್ಯಮಂತ್ರಿಗಳೇ” ಎಂದು ಯು.ಟಿ. ಖಾದರ್ ತಮ್ಮ ಸಂದೇಶವನ್ನು ಮುಕ್ತಾಯಗೊಳಿಸಿದ್ದಾರೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page