August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ರವೀಂದ್ರ ಚಾರ್ಮಾಡಿ ಬಂಧನ

ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ. 68/1989 ಕಲಂ 341, 323, 326 ಹಾಗೂ 34 ಐಪಿಸಿ ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

CC ನಂ. 1720/1990 ಹಾಗೂ CR ನಂ. LPC 04/1992 ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ರವೀಂದ್ರ ಚಾರ್ಮಾಡಿಯನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಲಾಗಿದೆ. ಬಂಧಿತನನ್ನು ಜನವರಿ 06ರಂದು ಮಂಗಳವಾರ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

36 ವರ್ಷಗಳ ಬಳಿಕ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವುದು ಬೆಳ್ತಂಗಡಿ ಪೊಲೀಸರ ಕಾರ್ಯಕ್ಷಮತೆಯನ್ನು ತೋರಿಸುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page