August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಟ್ಟೆ ವಿನಯ ಹೆಗ್ಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಶ್ರದ್ಧಾಂಜಲಿ ಸಭೆ

ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಗಳಿಗೆ ಅಪಾರ ಮತ್ತು ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ದಿವಂಗತ ನಿಟ್ಟೆ ವಿನಯ ಹೆಗ್ಡೆ ಅವರ ಆದರ್ಶಯುತ ಜೀವನ ಸಮಾಜಕ್ಕೆ ಸದಾ ಪ್ರೇರಣಾದಾಯಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ ಹೇಳಿದರು.

ಇತ್ತೀಚೆಗೆ ನಿಧನರಾದ ನಿಟ್ಟೆ ವಿನಯ ಹೆಗ್ಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿ ಮಾತನಾಡಿದರು. ಸಾಧನೆಯ ಜೊತೆಗೆ ಸರಳತೆ, ಸೌಜನ್ಯ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ವಿನಯ ಹೆಗ್ಡೆ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಗಳಿಸಿದ್ದರು ಎಂದು ಅವರು ಹೇಳಿದರು. ರೆಡ್ ಕ್ರಾಸ್ ಸಂಸ್ಥೆಯ ಸಮಾಜ ಸೇವಾ ಚಟುವಟಿಕೆಗಳಿಗೆ ವಿನಯ ಹೆಗ್ಡೆ ಅವರು ನೀಡಿದ ಬೆಂಬಲ ಹಾಗೂ ಪ್ರೋತ್ಸಾಹ ಸದಾ ಸ್ಮರಣೀಯವಾಗಿರುತ್ತದೆ ಎಂದು ಶಾಂತಾರಾಮ ಶೆಟ್ಟಿ ಸ್ಮರಿಸಿದರು.

ಈ ಶ್ರದ್ಧಾಂಜಲಿ ಸಭೆಯಲ್ಲಿ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ದ.ಕ. ಜಿಲ್ಲಾ ರೆಡ್ ಕ್ರಾಸ್ ಸಮಿತಿಯ ಉಪಾಧ್ಯಕ್ಷ ಡಾ. ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ. ಸುಮನಾ ಬಿ. ಹಾಗೂ ಪಿ.ಬಿ. ಹರೀಶ್ ರೈ ಅವರು ನುಡಿ ನಮನ ಸಲ್ಲಿಸಿದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಶಂತನು, ರೆಡ್ ಕ್ರಾಸ್ ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಗುರುದತ್ ನಾಯಕ್ ಹಾಗೂ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page