May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್ @ ಶೌಕತ್ ಗಡಿಪಾರು

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬ ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ಖಾದರ್ @ ಶೌಕತ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಮೂರು ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯ ಆಧಾರದಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅದರಂತೆ, ಅಬ್ದುಲ್ ಖಾದರ್ @ ಶೌಕತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಲಾಗಿದೆ. ಸದರಿ ಆದೇಶದಂತೆ ಜನವರಿ 08ರಂದು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಪೊಲೀಸ್ ಭದ್ರತೆಯೊಂದಿಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page