July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಈ ಸರ್ಕಾರದಲ್ಲಿ ಶಾಸಕರಿಗೇ ಭದ್ರತೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರ ಗತಿ ಏನು ಎಂಬ ಪ್ರಶ್ನೆ ಮೂಡುತ್ತದೆ. ಕೇವಲ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರ ಮೇಲಷ್ಟೇ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಇದು ಕೇವಲ ಒಬ್ಬ ದಲಿತ ಸಹೋದರಿಯ ಮೇಲಿನ ಅವಮಾನವಲ್ಲ, ದೇಶದ ಮಹಿಳೆಯೊಬ್ಬರ ಘನತೆ ಹಾಗೂ ಗೌರವದ ಮೇಲಿನ ನೇರ ದಾಳಿಯಾಗಿದೆ. ಸರ್ಕಾರ ಇರುವ ತನಕ ತಾನು ಏನೂ ಮಾಡಲಾಗದು ಎಂಬ ಭಾವನೆಯಿಂದ ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಪೊಲೀಸರು ಇಂತಹವರ ವಿರುದ್ಧ ಕಾನೂನಿನ ತಾಕತ್ತನ್ನು ಪ್ರದರ್ಶಿಸಬೇಕು. ಮಹಿಳೆಯರಿಗೆ ಕೇವಲ ಎರಡು ಸಾವಿರ ರೂಪಾಯಿ ಸಹಾಯವಲ್ಲ, ಗೌರವ ಹಾಗೂ ಸುರಕ್ಷತೆಯೂ ಅಗತ್ಯ. ಅಧಿಕಾರ ಶಾಶ್ವತವಲ್ಲ; ಸರ್ಕಾರ ತನ್ನ ಪಾಪಕಾರ್ಯಗಳಿಗೆ ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು  ಮಾತನಾಡಿ, ಅಂಬೇಡ್ಕರ್ ಕಾಲದಿಂದಲೂ ಕಾಂಗ್ರೆಸ್ ದಲಿತರಿಗೆ ಅವಮಾನ ಮಾಡುತ್ತಲೇ ಬಂದಿದೆ. ಇದೀಗ ದಲಿತ ಸಮುದಾಯದ ಶಾಸಕಿಯೊಬ್ಬರಿಗೆ ಅವಮಾನ ಮಾಡುವ ಮೂಲಕ ಅದನ್ನು ಮುಂದುವರಿಸಿದೆ ಎಂದು ಆರೋಪಿಸಿದರು.

ಸುಲೋಚನಾ ಭಟ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಎರಡು ಸಾವಿರ ರೂಪಾಯಿ ಸಹಾಯ ನಮಗೆ ಬೇಡ; ನ್ಯಾಯ ಬೇಕು ಎಂದು ಸ್ಪಷ್ಟಪಡಿಸಿದರು. ಪ್ರತಿಭಟನೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ಮೋನಪ್ಪ ಭಂಡಾರಿ, ಸಂಜೀವ ಮಠಂದೂರು, ಬಾಲಕೃಷ್ಣ ಭಟ್, ಪೂರ್ಣಿಮಾ, ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್, ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು, ಎಸ್ಸಿ/ಎಸ್ಟಿ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

 

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page