October 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲದಲ್ಲಿ ಇಂದು ಜನವರಿ 12ರಂದು ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮ

ವಿಟ್ಲ ಉಪನೋಂದಣಾಧಿಕಾರಿ ಬಿಂದುಮಣಿ ಶರ್ಮ ಅವರಿಂದ ಪತ್ರಿಕಾ ಪ್ರಕಟಣೆ

ಡಿಜಿಟಲ್ ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಉಪನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ವಿಟ್ಲ ಉಪನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಇಂದು ಜನವರಿ 12ರಂದು ಸೋಮವಾರ ಸಂಜೆ 4.00 ಗಂಟೆಗೆ ಬಂಟ್ವಾಳ ತಾಲೂಕು ಆಡಳಿತ ಸೌಧದ ಸಬಾಂಗಣದಲ್ಲಿ ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮದಲ್ಲಿ ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಹಾಗೂ ಸೌಹಾರ್ದ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಬಹುದು. ವಿಟ್ಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಬಂಧಿತ ಸಂಸ್ಥೆಗಳ ಸಿಬ್ಬಂದಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ತರಬೇತಿ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಟ್ಲ ಉಪನೋಂದಣಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ವಿಟ್ಲ ಉಪನೋಂದಣಾಧಿಕಾರಿ ಬಿಂದುಮಣಿ ಶರ್ಮ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಬಲ್ಮಠ ದಿ ಮಿಶನ್ ಸ್ಕೂಲ್‍ಗೆ ಮಕ್ಕಳನ್ನು ದಾಖಲಿಸದಂತೆ ಸಾರ್ವಜನಿಕರಿಗೆ DDPI ಅವರ ಕಟ್ಟುನಿಟ್ಟಿನ ಎಚ್ಚರಿಕೆ!

ಇಲಾಖಾ ಅನುಮತಿಯಿಲ್ಲದೆ ಅಕ್ರಮವಾಗಿ ತರಗತಿ ನಿರ್ವಹಣೆ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಅನಧಿಕೃತ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ತನ್ನ ಚಾಟಿ ಬೀಸಿದೆ. ನಗರದ ಪ್ರತಿಷ್ಠಿತ
News

ಧರ್ಮಸ್ಥಳದಲ್ಲಿ ಅಕ್ಟೋಬರ್ 21ರವರೆಗೆ ಸೀರೆಗಳ ಹಬ್ಬ – ಸುನಿಲ್ ಸಿಲ್ಕ್ಸ್‌ನಲ್ಲಿ ಶೇಕಡಾ 50ರವರೆಗೆ ರಿಯಾಯಿತಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ಮಳಿಗೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸೀರೆ ಮೇಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.

You cannot copy content of this page