May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನವರಿ 25ರಂದು ಮಂಗಳೂರಿನಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಜನವರಿ 25ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಹಾಗೂ ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ. ಮುಖ್ಯ ಅತಿಥಿಯಾಗಿ ಉಪಸ್ಥಿತಲಿರುವರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಹಾಗೂ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page