August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಯತ್ನ ಹಾಗೂ ಗುಂಪು ಹಲ್ಲೆ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಯತ್ನ ಹಾಗೂ ಅದರ ನಂತರ ನಡೆದ ಗುಂಪು ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜನವರಿ 20ರಂದು ಮಂಗಳವಾರ ಬೆಳಗ್ಗಿನ ಜಾವ 02.10 ರಿಂದ 02.30 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು, ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ಮರೋಡಿ ಗ್ರಾಮ ನಿವಾಸಿ 22 ವರ್ಷ ಪ್ರಾಯದ ದೇವಿಪ್ರಸಾದ್, ಅವರ ಮನೆ ಹತ್ತಿರದ ಮೋಯಿದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬವರು ಪಿರ್ಯಾದಿದಾರರ ಬೈಕ್ ಕಳವು ಮಾಡಿಕೊಂಡು ಹೋಗಲು ಯತ್ನಿಸಿದ ವೇಳೆ ತಡೆಯಲು ಮುಂದಾದ ದೇವಿಪ್ರಸಾದ್ ಮೇಲೆ ಹಲ್ಲೆ ನಡೆಸಿ ಬೈಕ್‌ನೊಂದಿಗೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂಬ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2026 ಕಲಂ 303(2), 307 ಬಿ.ಎನ್.ಎಸ್–2023 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ಘಟನೆಯ ಸಂಬಂಧವಾಗಿ, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಬೈಕ್ ತೆಗೆದುಕೊಂಡು ಹೋಗುವ ಸಂದರ್ಭ ಸುಮಾರು 25–30 ಮಂದಿಯ ಅಕ್ರಮ ಕೂಟ ಸೇರಿ ಪಿರ್ಯಾದಿದಾರರು ಹಾಗೂ ಅವರ ಸ್ನೇಹಿತನನ್ನು ಸುತ್ತುವರಿದು ಅವಾಚ್ಯ ಶಬ್ದಗಳಿಂದ ಬೈದು, ಕೈಯಿಂದ ಹಾಗೂ ಮರದ ಕೋಲಿನಿಂದ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿಹಾಕಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಮಂಗಳೂರಿನ ಬೇಂಗ್ರೆ ಕುಳೂರು ನಿವಾಸಿ 29 ವರ್ಷ ಪ್ರಾಯದ ಅಬ್ದುಲ್ ಸಮದ್ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 03/2026 ಕಲಂ 189(2), 191(2), 191(3), 352, 115(2), 118(1), 351(2) ಹಾಗೂ 190 ಬಿ.ಎನ್.ಎಸ್–2023 ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page